![](https://puttur.suddinews.com/wp-content/uploads/2024/06/Imperial_Manjunatheshwara_-GL-Acharya.gif)
ನೆಲ್ಯಾಡಿ: ಕೌಕ್ರಾಡಿ ಗ್ರಾಮದ ಕಾಪಿನಬಾಗಿಲು ನಿವಾಸಿ, ಕೆಎಸ್ಆರ್ಟಿಸಿ ಸಂಚಾರ ನಿಯಂತ್ರಕ ವರ್ಗೀಸ್(56 ವ.)ರವರು ಜು.19 ರಂದು ಅನಾರೋಗ್ಯದಿಂದ ನಿಧನರಾಗಿದ್ದಾರೆ.
![](https://puttur.suddinews.com/wp-content/uploads/2023/07/f5c7c121-e3b3-4240-8c84-66be50eb2fe2.jpg)
ವರ್ಗೀಸ್ ಅವರು ಕೆ.ಎಸ್.ಆರ್.ಟಿ.ಸಿ.ಯ ಧರ್ಮಸ್ಥಳ ಘಟಕದ ಉಜಿರೆಯ ಸಂಚಾರ ನಿಯಂತ್ರಣ ಕೇಂದ್ರದಲ್ಲಿ ಸಂಚಾರ ನಿಯಂತ್ರಕರಾಗಿ ಕೆಲಸ ಮಾಡುತ್ತಿದ್ದರು. ಅನಾರೋಗ್ಯದ ಹಿನ್ನೆಲೆಯಲ್ಲಿ ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಅವರು ಚಿಕಿತ್ಸೆಗೆ ಸ್ಪಂದಿಸದೆ ನಿಧನರಾದರು. ಮೃತರು ಪತ್ನಿ ಹಾಗೂ ಮಕ್ಕಳನ್ನು ಅಗಲಿದ್ದಾರೆ.