ಪುತ್ತೂರು: ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್ಗೆ 3 ರೂಪಾಯಿ ಏರಿಕೆ ಮಾಡುವುದಕ್ಕೆ ರಾಜ್ಯ ಸರ್ಕಾರ ಅನುಮತಿ ನೀಡಿದ್ದು, ಆಗಸ್ಟ್ 1ರಿಂದ ಪರಿಷ್ಕೃತ ದರ ಜಾರಿಗೆ ಬರಲಿದೆ.
ಕೆಎಂಎಫ್ ಪ್ರತಿ ಲೀಟರ್ಗೆ 5 ರೂ.ಹೆಚ್ಚಳಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು.ಆದರೆ 3 ರೂ.ಹೆಚ್ಚಳಕ್ಕೆ ಮುಖ್ಯಮಂತ್ರಿ ಒಪ್ಪಿಗೆ ಸೂಚಿಸಿದ್ದಾರೆ.
ಹೆಚ್ಚಳವಾದ 3 ರೂ.ಹಾಲು ಉತ್ಪಾದಕರಿಗೇ ಹೋಗಬೇಕು ಎಂದು ಸಿಎಂ ಸೂಚಿಸಿರುವುದಾಗಿ ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ಹೇಳಿದ್ದಾರೆ.ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದಲ್ಲಿನ ಎಲ್ಲ ಹಾಲು ಒಕ್ಕೂಟಗಳು ಹಾಗೂ ಕೆಎಂಎಫ್ ಅಧ್ಯಕ್ಷರ ಸಭೆ ನಡೆಸಿದ ಬಳಿಕ ಹಾಲಿನ ದರ ಏರಿಕೆಗೆ ಸಮ್ಮತಿ ಸೂಚಿಸಿದ್ದಾರೆ.
ಸಹಕಾರ ಸಚಿವ ಕೆ.ಎನ್.ರಾಜಣ್ಣ, ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್ ಸಹಕಾರ ಇಲಾಖೆ ಪ್ರಧಾನ ಕಾರ್ಯದರ್ಶಿ ಎನ್.ಮಂಜುನಾಥ್ ಪ್ರಸಾದ್, ಪಶುಸಂಗೋಪನಾ ಇಲಾಖೆ ಕಾರ್ಯದರ್ಶಿ ಸಲ್ಮಾ ಫಾಹಿಂ, ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಜಗದೀಶ್, KMF ನಿರ್ದೇಶಕ ಹೆಚ್.ಡಿ.ರೇವಣ್ಣ ಸಭೆಯಲ್ಲಿ ಭಾಗವಹಿಸಿದ್ದರು.