ಹಿರೇಬಂಡಾಡಿ: ಹಿರೇಬಂಡಾಡಿಯಲ್ಲಿ ನಡೆಯಲಿರುವ 2023-24ನೇ ಸಾಲಿನ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕ ಬಾಲಕಿಯರ ಕ್ರೀಡಾಕೂಟದ ಪೂರ್ವಭಾವಿ ಸಭೆ ಹಿರೇಬಂಡಾಡಿ ಸರಕಾರಿ ಪ್ರೌಢಶಾಲೆ ಸಭಾಂಗಣದಲ್ಲಿ ನಡೆಯಿತು.
ಹಿರೇಬಂಡಾಡಿ ಗ್ರಾ.ಪಂ.ಅಧ್ಯಕ್ಷೆ ಚಂದ್ರಾವತಿ ನೆಹರುತೋಟರವರು ಅಧ್ಯಕ್ಷತೆ ವಹಿಸಿದ್ದರು. ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಸುಂದರ ಗೌಡರವರ ಮಾರ್ಗದರ್ಶನದಲ್ಲಿ ವಿವಿಧ ಸಮಿತಿಗಳನ್ನು ರಚಿಸಲಾಯಿತು. ನಿಕಟಪೂರ್ವ ಶಾಸಕ ಸಂಜೀವ ಮಠಂದೂರುರವರು ವಿವಿಧ ಸಮಿತಿಗಳ ಜವಾಬ್ದಾರಿಗಳು ಮತ್ತು ಕ್ರೀಡಾಕೂಟ ಉತ್ತಮವಾಗಿ ಮೂಡಿಬರಲು ಕ್ರೀಡಾಭಿಮಾನಿಗಳ ಪ್ರಾಮಾಣಿಕ ಸೇವೆಯ ಅವಶ್ಯಕತೆಯನ್ನು ಒತ್ತಿ ಹೇಳಿದರು. ಶಾಲಾ ಅಭಿವೃದ್ಧಿ ಸಮಿತಿಯ ನಿಕಟಪೂರ್ವ ಅಧ್ಯಕ್ಷ ಶ್ರೀಧರ ಮಠಂದೂರು, ಗ್ರಾಮ ಪಂಚಾಯಿತಿ ಸದಸ್ಯರು, ಶಾಲಾ ಅಭಿವೃದ್ಧಿ ಸಮಿತಿಯ ಸದಸ್ಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಉಪ್ಪಿನಂಗಡಿ ವಲಯ ಪಂದ್ಯಾಟಗಳ ನೋಡೆಲ್ ಶಿಕ್ಷಕ ಚಕ್ರಪಾಣಿ ಎ.ವಿ., ವಾಣಿ ಬಾಲ ವಿಕಾಸ ಸಂಸ್ಥೆಯ ಆಡಳಿತ ಅಧಿಕಾರಿ ರವೀಂದ್ರ ಶೆಟ್ಟಿ ದರ್ಬೆ, ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ಬಾಲಚಂದ್ರ ಜೆ, ನಿವೃತ್ತ ಎಎಸ್ಐ ಸುಬ್ರಾಯ, ಊರಿನ ವಿವಿಧ ಸಂಘಗಳ ಪದಾಧಿಕಾರಿಗಳು, ದಾನಿಗಳು, ಗಣ್ಯರು, ಪೋಷಕರು ಸಭೆಯಲ್ಲಿ ಉಪಸ್ಥಿತರಿದ್ದರು. ದೈಹಿಕ ಶಿಕ್ಷಣ ಶಿಕ್ಷಕ ಸೀತಾರಾಮ ಗೌಡ. ಬಿ ಸ್ವಾಗತಿಸಿದರು. ಮುಖ್ಯ ಶಿಕ್ಷಕ ಹರಿಕಿರಣ್ ಕೆ.ರವರು ಕಾರ್ಯಕ್ರಮ ಸಂಘಟಿಸಿ ವಂದಿಸಿದರು. ಶಿಕ್ಷಕ ವೃಂದದವರು ಸಹಕರಿಸಿದರು. ಇದೇ ಸಂದರ್ಭದಲ್ಲಿ ವಿವಿಧ ಸಮಿತಿಗಳ ಅಧ್ಯಕ್ಷರುಗಳ ಮತ್ತು ಸದಸ್ಯರುಗಳ ಆಯ್ಕೆ ಪ್ರಕ್ರಿಯೆಯು ಭಾಗವಹಿಸಿದ ಕ್ರೀಡಾಭಿಮಾನಿಗಳ ಸಮ್ಮುಖದಲ್ಲಿ ನಡೆಯಿತು.