ಯುವ ಬಂಟರ ಸಂಘದ ಆಶ್ರಯದಲ್ಲಿ ಗಣಪತಿ ಹವನ, ಶ್ರೀ ಸತ್ಯನಾರಾಯಣ ಪೂಜೆ

0

ಪುತ್ತೂರು: ತಾಲ್ಲೂಕು ಯುವ ಬಂಟರ ಸಂಘದ ಆಶ್ರಯದಲ್ಲಿ ಜು.22 ರಂದು ಪುತ್ತೂರು ಬಂಟರ ಭವನದಲ್ಲಿ ಗಣಪತಿ ಹವನ, ಶ್ರೀ ಸತ್ಯನಾರಾಯಣ ಪೂಜೆ ನಡೆಯಿತು. ತಾಲ್ಲೂಕು ಯುವ ಬಂಟರ ಸಂಘದ ಅಧ್ಯಕ್ಷ ಮುಂಡಾಳಗುತ್ತು ಶಶಿರಾಜ್ ರೈ, ಪ್ರಧಾನ ಕಾರ್ಯದರ್ಶಿ ರಂಜಿನಿ ಶೆಟ್ಟಿ, ಕೋಶಾಧಿಕಾರಿ ಕೆ.ಸಿ.ಅಶೋಕ್ ಶೆಟ್ಟಿ ಮತ್ತು ಎಲ್ಲಾ ಪದಾಧಿಕಾರಿಗಳು ತುಳುನಾಡ ಬಂಟೆರೆ ಪರ್ಬ ಕಾರ್ಯಕ್ರಮದ ಸಂಚಾಲಕ ಹರ್ಷಕುಮಾರ್ ರೈ ಮಾಡಾವು, ಭಾಗ್ಯೇಶ್ ರೈ ಕೆಯ್ಯೂರು, ಮಾತೃಸಂಘದ ಉಪಾಧ್ಯಕ್ಷ ಕಾವು ಹೇಮನಾಥ ಶೆಟ್ಟಿ, ಪುತ್ತೂರು ಬಂಟರ ಸಂಘದ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು, ಪ್ರಧಾನ ಕಾರ್ಯದರ್ಶಿ ರಮೇಶ್ ರೈ ಡಿಂಬ್ರಿ, ಕೋಶಾಧಿಕಾರಿ ಕೃಷ್ಣ ಪ್ರಸಾದ್ ಅಳ್ವ ಉಪ್ಪಳಿಗೆ ಹಾಗೂ ನಿರ್ದೇಶಕರುಗಳು, ಮಹಿಳಾ ಮತ್ತು ವಿದ್ಯಾರ್ಥಿ ಬಂಟರ ಸಂಘದ ಪ್ರಮುಖರು ಭಾಗವಹಿಸಿದರು.

LEAVE A REPLY

Please enter your comment!
Please enter your name here