ಪುತ್ತೂರು: ಸತತ ಐದನೆಯ ಬಾರಿ ಶೇ.100 ಫಲಿತಾಂಶ ದೊಂದಿಗೆ ಪಿಯುಸಿ ಯಲ್ಲಿ ವಿಶೇಷ ಸಾಧನೆ ಮಾಡಿದ ಸಾಲ್ಮರ ಮೌಂಟನ್ ವ್ಯೂ ಸಮೂಹ ಶಿಕ್ಷಣ ಸಂಸ್ಥೆಯ ಅಧೀನದ ಅಸ್ವಾಲಿಹಾ ವುಮೆನ್ಸ್ ಶರೀಅತ್, ಪಿ ಯು ಕಾಲೇಜ್‌ಗೆ ದ.ಕ ಮತ್ತು ಉಡುಪಿ ಜಿಲ್ಲೆಯ ಮುಸ್ಲಿಂ ಶಿಕ್ಷಣ ಸಂಸ್ಥೆಗಳ ಒಕ್ಕೂಟವು ಪ್ರಶಸ್ತಿ ನೀಡಿ ಗೌರವಿಸಿದೆ.
ಮಂಗಳೂರಿನ ಜೆಪ್ಪಿನಮೊಗರು ಪ್ರೆಸ್ಟೀಜ್ ಇಂಟರ್ ನ್ಯಾಶನಲ್ ಸ್ಕೂಲ್ ಆಡಿಟೋರಿಯಂನಲ್ಲಿ ನಡೆದ ಮೀಫ್‌ನ ವಾರ್ಷಿಕೋತ್ಸವ ಮತ್ತು ಎಕ್ಸಲೆನ್ಸ್ ಅವಾರ್ಡ್ ಕಾರ್ಯಕ್ರಮ ದಲ್ಲಿ ಈ ಪ್ರಶಸ್ತಿಯನ್ನು ವಿತರಿಸಲಾಯಿತು. ಸ್ಪೀಕರ್ ಯು.ಟಿ.ಖಾದರ್ ಅವರು ಕಾರ್‍ಯಕ್ರಮ ಉದ್ಘಾಟಿಸಿದರು. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮತ್ತು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಪ್ರಶಸ್ತಿಯನ್ನು ವಿತರಿಸಿದರು.
ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಯು.ಮುಹಮ್ಮದ್ ಹಾಜಿ ಪಡೀಲ್, ಮೌಂಟನ್ ವ್ಯೂ ಅಸ್ವಾಲಿಹಾ ವುಮೆನ್ಸ್ ಶರೀಅತ್, ಪಿ.ಯು.ಕಾಲೇಜ್ ಕರೆಸ್ಪಾಂಡೆಂಟ್ ಹಾಜಿ ಅಬ್ದುಲ್ ರಹಿಮಾನ್ ಅಝಾದ್ ದರ್ಬೆ, ಉಸ್ತಾದ್ ಕೆ.ಎಂ.ಎ.ಕೊಡುಂಗಾಯಿ ಫಾಝಿಲ್ ಹನೀಫಿ, ಶಾಲಾ ಶಿಕ್ಷಕ ಅಶ್ರಫ್ ಮೊದಲಾದವರು ಸಚಿವರಿಂದ ಸ್ವೀಕರಿಸಿದರು. ಕಳೆದ ವರ್ಷವೂ ಮೌಂಟನ್ ವ್ಯೂ ಅಸ್ವಾಲಿಹಾ ವುಮೆನ್ಸ್ ಕಾಲೇಜ್ ಅತ್ಯುತ್ತಮ ಶಿಕ್ಷಣ ಸಂಸ್ಥೆ ಪ್ರಶಸ್ತಿಯನ್ನು ಪಡೆದಿತ್ತು.