ಇರ್ದೆ: ಸಾರ್ವಜನಿಕರೊಂದಿಗೆ ಯುವಕನ ಅಸಭ್ಯ ವರ್ತನೆ-ಪೊಲೀಸರು ವಿಚಾರಿಸಿದಾಗ ಮಾದಕ ವಸ್ತು ಸೇವನೆ‌ ಬೆಳಕಿಗೆ !

0

ಪುತ್ತೂರು: ಯುವಕನೋರ್ವ ಸಾರ್ವಜನಿಕರೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದಾರೆಂಬ ಮಾಹಿತಿ ಮೇರೆಗೆ ಸಂಪ್ಯ ಪೊಲೀಸರು ವಿಚಾರಿಸಿದಾಗ ಯುವಕ‌ ಗಾಂಜಾ ಸೇವನೆ ಮಾಡಿರುವ ಶಂಕೆಯಂತೆ ಆತನನ್ನು ವೈದ್ಯಕೀಯ ಪರೀಕ್ಷೆಗೊಳಪಡಿಸಿದಾಗ ಮಾದಕ ವಸ್ತು ಸೇವನೆ ಮಾಡಿರುವುದು ಧೃಢಪಟ್ಟಿದ ಹಿನ್ನಲೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.


ಇರ್ದೆ ಗ್ರಾಮ ತನ್ವೀರ್ ಮಂಜಿಲ್ ನಿವಾಸಿ ಮೊಹಮ್ಮದ್ ತಪ್ಸಿರ್ (21ವ) ರವರು ಗಾಂಜಾ ಸೇವನೆ ಮಾಡಿದ ಆರೋಪಿ. ಸಂಪ್ಯ ಪೊಲೀಸ್ ಠಾಣೆಯ ಎಸ್.ಐ ಧನಂಜಯ ಬಿ.ಸಿ ಅವರು ರೌಂಡ್ಸ್ ಕರ್ತವ್ಯದಲ್ಲಿದ್ದ ವೇಳೆ ಇರ್ದೆ ಗ್ರಾಮದ ದೂಮಡ್ಕ ಗೋಳಿಪದವು ಸಮೀಪ ಯುವಕನೋರ್ವ ಸಾರ್ವಜನಿಕರೊಂದಿಗೆ ಅಸಭ್ಯವಾಗಿ ವರ್ತಿಸುತ್ತಿರುವುದು ಕಂಡು ಬಂದಂತೆ ಆತನನ್ನು ವಿಚಾರಿಸಿದಾಗ ಆತ ಸಮರ್ಪಕ ಉತ್ತರ ನೀಡಲು ಅಸಮರ್ಥನಾಗಿದ್ದು, ಯಾವುದೋ ಮಾದಕ ವಸ್ತು ಗಾಂಜಾ ಸೇವನೆ ಮಾಡಿರುವುದು ಬೆಳಕಿಗೆ ಬಂದಿತ್ತು. ಈ ಕುರಿತು ಅತನನ್ನು ವೈದ್ಯಕೀಯ ಪರೀಕ್ಷೆಗೊಳಪಡಿಸಿದಾಗ ಆತ ಮಾದಕ ವಸ್ತು ಸೇವನೆ ಮಾಡಿರುವುದು ದೃಢಪಟ್ಟಿದೆ.‌ ಆರೋಪಿ ವಿರುದ್ಧ ಸಂಪ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here