ಪುತ್ತೂರು: ಸರ್ವೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅಟೆಂಡರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಬೆಳ್ತಂಗಡಿ ತಾಲೂಕಿನ ಇಳಂತಿಲ ಗ್ರಾಮದ ಮನಿಮಾರ್ ನಿವಾಸಿ ಅಂತಪ್ಪ(59 ವ) ಅವರು ಜು.29ರಂದು ರಾತ್ರಿ ನಿಧನ ಹೊಂದಿದ್ದಾರೆ. ಕಳೆದ 23 ವರ್ಷಗಳಿಂದ ಸರ್ವೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅಟೆಂಡರ್ ಆಗಿ ಸೇವೆ ಸಲ್ಲಿಸುತ್ತಿರುವ ಅವರು ಸಾರ್ವಜನಿಕರಿಗೆ ಉತ್ತಮ ಸೇವೆ ನೀಡುವ ಮೂಲಕ ಜನಾನುರಾಗಿಯಾಗಿದ್ದರು. ಮೃತರು ಪತ್ನಿ, ಇಬ್ಬರು ಪುತ್ರಿಯರು ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ.