ನೆಲ್ಯಾಡಿ: ಬಜತ್ತೂರು ಗ್ರಾಮದ ಹೊಸಗದ್ದೆ ಸರಕಾರಿ ಹಿ.ಪ್ರಾ.ಶಾಲೆಯ ಮುಖ್ಯಶಿಕ್ಷಕಿಯಾಗಿದ್ದು ವಯೋನಿವೃತ್ತಿ ಹೊಂದಿದ ಫೆಲ್ಸಿಡಯಾಸ್ ಹಾಗೂ 8 ವರ್ಷ ಸೇವೆ ಸಲ್ಲಿಸಿ ಬಂಟ್ವಾಳ ತಾಲೂಕಿಗೆ ವರ್ಗಾವಣೆಗೊಂಡ ಮೇಬಲ್ ಗ್ರೇಸಿ ಲಸ್ರಾದೋ ಅವರಿಗೆ ಬೀಳ್ಕೊಡುಗೆ ಸಮಾರಂಭ ಜು.31ರಂದು ಶಾಲೆಯಲ್ಲಿ ನಡೆಯಿತು.
ಎಸ್ಡಿಎಂಸಿ ಅಧ್ಯಕ್ಷ ಉಮೇಶ್ ಓ.ಅವರು ಅಧ್ಯಕ್ಷತೆ ವಹಿಸಿ ಶುಭಹಾರೈಸಿದರು. ಬಜತ್ತೂರು ಕ್ಲಸ್ಟರ್ ಸಿಆರ್ಪಿ ಮಂಜುನಾಥ ಕೆ.ವಿ.,ಯವರು ಮಾತನಾಡಿ, ಹೊಸಗದ್ದೆ ಶಾಲೆಯಲ್ಲಿ ಕಳೆದ 1 ವರ್ಷದಲ್ಲಿ ನಡೆದ ಪಠ್ಯೇತರ ಚಟುವಟಿಕೆಯನ್ನು ನೆನೆಪಿಸಿಕೊಂಡು ಮೆಚ್ಚುಗೆ ವ್ಯಕ್ತಪಡಿಸಿದರು. ಬಜತ್ತೂರು ಗ್ರಾ.ಪಂ.ಸದಸ್ಯ ಗಂಗಾಧರ ಗೌಡ, ದಾನಿ ಜಗದೀಶ್ ರಾವ್ ಮಣಿಕ್ಕಳ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ದ.ಕ.ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ವಿಮಲ್ಕುಮಾರ್, ಕಡಬ ತಾಲೂಕು ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶಾಂತಾರಾಮ ಓಡ್ಲ, ಪುತ್ತೂರು ತಾಲೂಕು ಶಿಕ್ಷಕರ ಸಂಘದ ಪದಾಧಿಕಾರಿ ಮೋಹನ್ಚಂದ್ರ, ಗೋಳಿತ್ತಟ್ಟು ಶಾಂತಿನಗರ ಶಾಲಾ ಮುಖ್ಯಶಿಕ್ಷಕ ಪ್ರದೀಪ್ ಬಾಕಿಲ, ಸಹಶಿಕ್ಷಕ ಮಂಜುನಾಥ ಮಣಕವಾಡ, ಸರ್ವೋದಯ ಪ್ರೌಢಶಾಲಾ ಮುಖ್ಯಶಿಕ್ಷಕರು, ಶಿಕ್ಷಕರು ಉಪಸ್ಥಿತರಿದ್ದರು.
ನಿವೃತ್ತಿಗೊಂಡ ಹಾಗೂ ವರ್ಗಾವಣೆಗೊಂಡ ಶಿಕ್ಷಕರಿಗೆ ಕಿರುಕಾಣಿಕೆ ನೀಡಿ ಗೌರವಿಸಿ ಬೀಳ್ಕೊಡಲಾಯಿತು. ಪವಿತ್ರ ಅಭಿನಂದನಾ ಪತ್ರ ವಾಚಿಸಿದರು. ಪ್ರಭಾರ ಮುಖ್ಯಗುರು ವಿದ್ಯಾ ಕೆ., ಸ್ವಾಗತಿಸಿ, ಕೊನೆಯಲ್ಲಿ ವಂದಿಸಿದರು. ಸಹಶಿಕ್ಷಕಿ ಮಾಲತಿ ಕೆ., ಕಾರ್ಯಕ್ರಮ ನಿರೂಪಿಸಿದರು.