ಪುತ್ತೂರು: ಸುದಾನ ವಸತಿ ಶಾಲೆಯಲ್ಲಿ STEM – Extemplar Education Linkers Foundation ವತಿಯಿಂದ 6 ರಿಂದ 8ನೇ ತರಗತಿಯ ವಿದ್ಯಾರ್ಥಿಗಳಿಗಾಗಿ ಆ.8ರಂದು ಕಾರ್ಯಗಾರವನ್ನು ನಡೆಸಲಾಯಿತು.
ಸಂಪನ್ಮೂಲ ವ್ಯಕ್ತಿಯಾಗಿ STEM ಸಂಸ್ಥೆಯ ಪದಾಧಿಕಾರಿಗಳಾದ ಶಾರೋನ್ ಜಾನ್ರವರು, ಪ್ರಚಲಿತ ಸಮಸ್ಯೆಗಳನ್ನು ಗುರುತಿಸುವುದು ಮತ್ತು ಅದಕ್ಕೆ ಪರಿಹಾರಾತ್ಮಕ ಯೋಜನೆಗಳ ತಯಾರಿಸುವುದರ ಬಗೆಗೆ ವಿದ್ಯಾರ್ಥಿಗಳಿಗೆ ಮಾಹಿತಿ ಮತ್ತು ತರಬೇತಿಯನ್ನು ನೀಡಿದರು. ಶಾಲೆಯ ಕಂಪ್ಯೂಟರ್ ವಿಭಾಗ ಮತ್ತು ವಿಜ್ಞಾನ ವಿಭಾಗ ಶಿಕ್ಷಕರು ಉಪಸ್ಥಿತರಿದ್ದರು. ಶಾಲೆಯ ವಿಜ್ಞಾನ ಸಂಘ ’ಅವನಿ’ಯು ಈ ಕಾರ್ಯಗಾರವನ್ನು ಆಯೋಜಿಸಿತ್ತು.