ಕುಂತೂರು: ಇಲ್ಲಿನ ಮಾರ್ ಇವಾನಿಯೋಸ್ ಶಿಕ್ಷಕ-ಶಿಕ್ಷಣ ಮಹಾವಿದ್ಯಾಲಯದಲ್ಲಿ ಭಾರತದ ಬಹು ಸಾಂಸ್ಕ್ರತಿಕತೆಯನ್ನು ಪ್ರತಿಬಿಂಬಿಸುವ ’ಸಾಂಪ್ರದಾಯಕ ದಿನ’ವನ್ನು ವೈವಿಧ್ಯಮಯವಾಗಿ ಆಚರಿಸಲಾಯಿತು.
ಕಾಲೇಜಿನ ಸಮಾಜ ವಿಜ್ಞಾನ ಸಂಘದ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮವನ್ನು ಕಾಲೇಜಿನ ವ್ಯವಸ್ಥಾಪಕರಾದ ಫಾ.ಡಾ.ಎಲ್ದೋ ಪುತ್ತನ್‌ಕಂಡತ್ತಿಲ್ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. ನಂತರ ಮಾತನಾಡುತ್ತಾ ಪ್ರಸ್ತುತ ಕಾಲಘಟ್ಟದಲ್ಲಿ ಬಹುಭಾಷಿಕ ಹಾಗೂ ಬಹು ಸಂಸ್ಕೃತಿಯ ನಾಡಿನಲ್ಲಿ ನಮ್ಮ ವೈವಿಧ್ಯಮಯ ಸಾಂಸ್ಕೃತಿಕ ಪರಂಪರೆಯನ್ನು ಉಳಿಸುವಲ್ಲಿ ಸಾಂಪ್ರದಾಯಕ ದಿನ ಆಚರಣೆಯ ಮಹತ್ವವನ್ನು ಕುರಿತು ವಿವರಿಸಿದರು.
ಕಾಲೇಜಿನ ಪ್ರಾಂಶುಪಾಲೆ ಉಷಾ.ಎಂ.ಎಲ್. ಸಾಂಪ್ರದಾಯಕ ದಿನ ಆಚರಣೆ ಹಿನ್ನಲೆಯ ಕುರಿತು ಸಂಕ್ಷಿಪ್ತವಾಗಿ ಮಾತನಾಡಿ ಪರಂಪರೆಯನ್ನು ಉಳಿಸಿಕೊಳ್ಳುವ ಕುರಿತಂತೆ ಪ್ರಶಿಕ್ಷಣಾರ್ಥಿಗಳಿಗೆ ಸಂದೇಶವನ್ನು ನೀಡಿದರು. ಸಮಾಜ ವಿಜ್ಞಾನ ಸಂಘದ ಕಾರ್ಯದರ್ಶಿ, ಪ್ರಶಿಕ್ಷಣಾರ್ಥಿ ಕು.ಶ್ವೇತಾ.ಪಿ. ಕಾರ್ಯಕ್ರಮದ ಕುರಿತು ಪ್ರಾಸ್ತಾವಿಕ ಮಾತುಗಳನ್ನಾಡಿದರು.
ಕಾಲೇಜಿನ ಸಮಾಜ ವಿಜ್ಞಾನ ಸಂಘದ ಸಂಯೋಜಕರಾದ ಉಪನ್ಯಾಸಕಿ ವಿನ್ಸಿ ಅಬ್ರಹಾಂ ಸ್ವಾಗತಿಸಿ, ಪ್ರಶಿಕ್ಷಣಾರ್ಥಿ ಕು.ಕೀರ್ತಿ ವಂದಿಸಿದರು.
ಪ್ರಶಿಕ್ಷಣಾರ್ಥಿಗಳಾದ ಕು.ಚೈತ್ರಾ ಮತ್ತು ಕು.ಸುಗುಣಾ. ಬಿ. ಎಮ್. ಕಾರ್ಯಕ್ರಮ ನಿರೂಪಿಸಿದರು.