ಮಂಗಳೂರು:ಲೋಕಾಯುಕ್ತ ಮಂಗಳೂರು ವಿಭಾಗದ ಪೊಲೀಸ್ ಅಧೀಕ್ಷಕರು, ಉಪಾಧೀಕ್ಷಕರು ಹಾಗೂ ನಿರೀಕ್ಷಕರು ಆ.9ರಂದು ಬೆಳಿಗ್ಗೆ 11 ಗಂಟೆಯಿಂದ ಪುತ್ತೂರು ತಾಲೂಕು ಕಚೇರಿಯಲ್ಲಿ ಜನ ಸಂಪರ್ಕ ಸಭೆಯನ್ನು ಹಮ್ಮಿಕೊಂಡಿದ್ದಾರೆ.
ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಮತ್ತು ಇನ್ನಿತರೆ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ ಅಥವಾ ನೌಕರರ ವಿರುದ್ಧ ಈ ಸಭೆಯಲ್ಲಿ ದೂರು ನೀಡಬಹುದಾಗಿದೆ.
ಹೆಚ್ಚಿನ ಮಾಹಿತಿಗೆ ಲೋಕಾಯುಕ್ತ ಪೊಲೀಸ್ ಅಧೀಕ್ಷಕರ ಕಚೇರಿ(೦824-2950997, 9364062517),ಪೊಲೀಸ್ ಉಪಾಧೀಕ್ಷಕರ ಕಚೇರಿ-1(0824-2453420, 9364062579),ಪೊಲೀಸ್ ಉಪಾಧೀಕ್ಷಕರ ಕಚೇರಿ-2(0824-2453420),ಪೊಲೀಸ್ ನಿರೀಕ್ಷಕರ ಕಚೇರಿ(0824-2427237)ಸಂಖ್ಯೆಗಳನ್ನು ಸಂಪರ್ಕಿಸುವಂತೆ ಕರ್ನಾಟಕ ಲೋಕಾಯುಕ್ತ ಮಂಗಳೂರು ವಿಭಾಗದ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.