ಪುತ್ತೂರು : ಆ. 05 ರಂದು 2022-23ನೇ ಸಾಲಿನಲ್ಲಿ ಎಸ್.ಎಸ್. ಎಲ್. ಸಿ ಹಾಗೂ ದ್ವಿತೀಯ ಪಿ.ಯು.ಸಿ ಯಲ್ಲಿ ಶೇಕಡ ನೂರು ಫಲಿತಾಂಶ ಬಂದಿದ್ದು , ಈ ಪ್ರಯುಕ್ತ ಎಲ್ಲಾ ವಿಧ್ಯಾರ್ಥಿನಿಯರನ್ನು ಸಂಸ್ಥೆಯ ವತಿಯಿಂದ ಸನ್ಮಾನಿಸಲಾಯಿತು.
ಮುಖ್ಯ ಅತಿಥಿಗಳಾಗಿ ಆಗಮಿಸಿದ ಕಡಬ ತಾ. ಸಬ್ ಇನ್ಸ್ಪೆಕ್ಟರ್ ಆಂಜನೇಯ ರೆಡ್ಡಿ ಮಾತನಾಡಿ , “ಪ್ರತಿಯೊಬ್ಬ ವಿದ್ಯಾರ್ಥಿ ತಮ್ಮ ಗುರಿಯನ್ನು ತಲುಪುವಲ್ಲಿ ಕಾರ್ಯಪ್ರವೃತ್ತರಾಗಬೇಕು ಹಾಗೂ “ಮಾತು” ಎಂಬುದು ಎಲ್ಲರ ಮನವನ್ನು ಗೆಲ್ಲುವಂತಿರಬೇಕು” ಎಂದು ಹೇಳಿ , ಹಾರೈಸಿದರು.
ಉಪ್ಪಿನಂಗಡಿ ಸರಕಾರಿ ಪ್ರ.ದ. ಕಾಲೇಜಿನ ಪ್ರಾಂಶುಪಾಲರಾದ ಡಾ. ಸುಬ್ಬಪ್ಪ ಕೈಕಂಬ ಮಾತನಾಡಿ , ಮಾನವೀಯ ಮೌಲ್ಯಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡಾಗ ಒಬ್ಬ ನೈಜ ಮನುಷ್ಯನಾಗಲು ಸಾಧ್ಯವಿದೆ ಎಂದರು. ಸಂಸ್ಥೆಯ ಹಳೆ ವಿದ್ಯಾರ್ಥಿನಿ ವೈದ್ಯೆ ಹಲೀಮಾ ಆಫ್ರಿನಾ ವಿದ್ಯಾರ್ಥಿಗಳಿಗೆ ಸ್ಪೂರ್ತಿದಾಯಕ ಮಾತುಗಳನ್ನಾಡಿ ಶುಭ ಹಾರೈಸಿದರು. ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಶಮೀಮ್ ವಿದ್ಯಾರ್ಥಿಗಳ ಮುಂದಿನ ಭವಿಷ್ಯಕ್ಕೆ ಹಾರೈಸಿದರು. ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಅಮೀನ್ ಅಹ್ಸನ್ ಅಧ್ಯಕ್ಷೀಯ ಮಾತುಗಳನ್ನಾಡಿದರು.
ಪ್ರಾಂಶುಪಾಲೆ ಆಯಿಶಾ ಫರ್ಝಾನ ಅತಿಥಿಗಳನ್ನು ಸ್ವಾಗತಿಸಿದರು. ಸಂಸ್ಥೆಯ ಸಂಚಾಲಕರಾದ ಅಬ್ದುಲ್ ಹಸೀಬ್ ರವರು ಪ್ರಾಸ್ತಾವಿಕ ನುಡಿಗಳಿತ್ತರು. ವಿದ್ಯಾರ್ಥಿನಿಯರಾದ ಆಯಿಶಾ ಫಿಝಾ, ನಶ್ವ ಕುಲ್ಸುಮ್, ಜಿ.ಆತಿಫಾ, ಸಾಬಿರ ಹಾಗೂ ಶಿಕ್ಷಕಿ ಮಮತಾ ಕುಮಾರಿ ಇವರು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು.
ಶಿಕ್ಷಕಿ ಶ್ರೀಮತಿ ಶಬಾನಾ ಸಈದ್ ಧನ್ಯವಾದವನ್ನಿತ್ತರು. ಉಪನ್ಯಾಸಕಿಯರಾದ ರಮ್ಯಾ ಎಸ್ ಮತ್ತು ಮೈಮೂನಾರವರು ಕಾರ್ಯಕ್ರಮವನ್ನು ನಿರೂಪಿಸಿದರು