ಪುತ್ತೂರು: 2011 ರಲ್ಲಿ ಕಾಲೇಜು ವಿದ್ಯಾರ್ಥಿನಿ ಸೌಜನ್ಯ ಕೊಲೆ ಪ್ರಕರಣದಲ್ಲಿ ಆದಷ್ಟು ಬೇಗ ಇತ್ಯರ್ಥವಾಗಿ ನೈಜ ಆರೋಪಿಗಳಿಗೆ ಶಿಕ್ಷೆಯಾಗುವಂತೆ ಪುತ್ತೂರು ವಿಶ್ವಹಿಂದು ಪರಿಷತ್ ಮತ್ತು ಬಜರಂಗದಳದಿಂದ ಆ.7ರಂದು ಪುತ್ತೂರಿನಲ್ಲಿ ಕಾಲ್ನಡಿಗೆ ಮತ್ತು ಸಾಮೂಹಿಕ ಪ್ರಾರ್ಥನೆ ನಡೆಸಲಾಗುವುದು ಎಂದು ವಿಹಿಂಪ, ಬಜರಂಗದಳ ಪ್ರಕಟಣೆಯಲ್ಲಿ ತಿಳಿಸಿದೆ.
ಬೆಳಿಗ್ಗೆ ಗಂಟೆ 10ಕ್ಕೆ ಪುತ್ತೂರು ಶ್ರೀ ಲಕ್ಷ್ಮೀವೆಂಕಟರಮಣ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿ ನಂತರ ಅಲ್ಲಿಂದ ಕಾಲ್ನಡಿಗೆ ಮೂಲಕ ಮುಖ್ಯರಸ್ತೆಯಾಗಿ ಸಾಗಿ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ ನಡೆಸಲಾಗುವುದು. ಸಾಮೂಹಿಕ ಪ್ರಾರ್ಥನೆಯಲ್ಲಿ ಸೌಜನ್ಯ ತಾಯಿ ಕುಸುಮಾವತಿ ಅವರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.