ಪುತ್ತೂರು:ಕರಾವಳಿ ಜಿಲ್ಲೆಗಳಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದ ಪುತ್ತೂರಿನ ವಿದ್ಯಾರ್ಥಿನಿ ಸೌಮ್ಯಾ ಭಟ್ ಕೊಲೆ ಪ್ರಕರಣ ನಡೆದು 26 ವರ್ಷವಾದರೂ ಸೌಮ್ಯ ಭಟ್ ಕುಟುಂಬಕ್ಕೆ ನ್ಯಾಯ ಇನ್ನೂ ಸಿಕ್ಕಿಲ್ಲ.ಪುತ್ತಿಲ ಪರಿವಾರದವರು ಆ.7ರಂದು, ಕಬಕದಲ್ಲಿರುವ `ಸೌಮ್ಯ ಸ್ಮೃತಿ’ ಕಟ್ಟೆಗೆ ತೆರಳಿ ಕಟ್ಟೆಯನ್ನು ಸ್ವಚ್ಛಗೊಳಿಸಿ ಮಾಲಾರ್ಪಣೆ ಮಾಡಿ ನಮನ ಸಲ್ಲಿಸಲಾಯಿತು.
ಪುತ್ತಿಲ ಪರಿವಾರ ಸಂಘಟನೆಯ ತಾಲೂಕು ಅಧ್ಯಕ್ಷ ಪ್ರಸನ್ನ ಕುಮಾರ್ ಮಾರ್ತ ಮತ್ತು ಸಂಘಟನೆಯ ಕಾರ್ಯಕರ್ತರು, ಹಿಂದು ಸಂಘಟನೆಯ ಮುಖಂಡ ಅರುಣ್ ಕುಮಾರ್ ಪುತ್ತಿಲ ಅವರು ಸೌಮ್ಯ ಸ್ಮೃತಿ ಕಟ್ಟೆಯ ಸುತ್ತಲಿನ ಗಿಡಗಂಟಿಗಳನ್ನು ತೆರವು ಮಾಡಿ ಸ್ವಚ್ಛಗೊಳಿಸಿ ಮಾಲಾರ್ಪಣೆ ಮಾಡಿದರು.ಈ ಸಂದರ್ಭ ಡಾ.ಶಶಿಧರ್ ಕಜೆ, ಪುತ್ತಿಲ ಪರಿವಾರದ ಜೊತೆ ಕಾರ್ಯದರ್ಶಿ ಉಮೇಶ್ ಗೌಡ, ನಗರ ಅಧ್ಯಕ್ಷ ಅನಿಲ್ ತೆಂಕಿಲ, ಪ್ರವೀಣ್ ಶೆಟ್ಟಿ ತಿಂಗಳಾಡಿ, ಕೃಷ್ಣಪ್ರಸಾದ್ ಶೆಟ್ಟಿ, ವಸಂತ ಕಬಕ, ಗಣೇಶ್ ಕಬಕ, ಸಚಿನ್,ವಿದ್ಯಾಪ್ರಸಾದ್ ಮೊದಲಾದವರು ಉಪಸ್ಥಿತರಿದ್ದರು.