ಪ್ರತಿಷ್ಠಿತ ಪ್ರೇರಣಾ ಸಂಸ್ಥೆಗೆ ಸಿ.ಎ.ಫೌಂಡೇಶನ್ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ

0

ಇಬ್ಬರು ವಿದ್ಯಾರ್ಥಿನಿಯರು ಉತ್ತಮ ಅಂಕಗಳೊಂದಿಗೆ ತೇರ್ಗಡೆ

ಪುತ್ತೂರು: ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ಪುತ್ತೂರಿನ ಪ್ರತಿಷ್ಠಿತ ‘ಪ್ರೇರಣಾ’ ಸಂಸ್ಥೆಯಲ್ಲಿ 12 ವಿದ್ಯಾರ್ಥಿಗಳು ತರಬೇತಿ ಪಡೆದಿದ್ದು, ಅದರಲ್ಲಿ ಇಬ್ಬರು ವಿದ್ಯಾರ್ಥಿನಿಯರು ಜೂನ್ ತಿಂಗಳಲ್ಲಿ ಪರೀಕ್ಷೆ ಬರೆದು ಉತ್ತಮ ಅಂಕಗಳೊಂದಿಗೆ ತೇರ್ಗಡೆಗೊಂಡಿದ್ದಾರೆ. ಈ ಮೂಲಕ ಸಂಸ್ಥೆಗೆ ಶೇ.100 ಫಲಿತಾಂಶ ಬಂದಿದೆ.


ಪ್ರೇರಣಾ ಸಂಸ್ಥೆಯಿಂದ ಸಿ.ಎ.ಫೌಂಡೇಶನ್ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿನಿಯರಾದ ಸಿಮ್ರನ್ ತಾಜ್ ಹಾಗೂ ಸ್ಮಿತಾ ಎಸ್.ರೈ ಉತ್ತಮ ಅಂಗಳೊಂದಿಗೆ ತೇರ್ಗಡೆಗೊಂಡಿದ್ದಾರೆ ಎಂದು ಪ್ರೇರಣಾ ಸಂಸ್ಥೆಯ ಪ್ರಕಟಣೆ ತಿಳಿಸಿದೆ. ಆರ್ಯಾಪು ಗ್ರಾಮದ ಸಂಪ್ಯ ನಿವಾಸಿಯಾದ ಸಿಮ್ರನ್ ತಾಜ್ ಅವರು ಮುಬಾರಕ್ ಪಾಶಾ ಹಾಗೂ ಸಬಿಹಾ ಖನಮ್ ದಂಪತಿ ಪುತ್ರಿ. ಕೊಳ್ತಿಗೆ ಗ್ರಾಮದ ಪಾಂಬಾರು ನಿವಾಸಿಯಾದ ಸ್ಮಿತಾ ಎಸ್ ರೈ ಅವರು ಸಂಜೀವ ರೈ ಹಾಗೂ ಕಸ್ತೂರಿ ದಂಪತಿ ಪುತ್ರಿ.

LEAVE A REPLY

Please enter your comment!
Please enter your name here