ಕಾಣಿಯೂರು: 1700ನೇ ಮದ್ಯವರ್ಜನ ಶಿಬಿರ ಸಂಪನ್ನ

0

ಶಿಬಿರದಿಂದ ಸಾಮರಸ್ಯದ ವಾತಾವರಣ ನಿರ್ಮಾಣ- ಉದಯ ರೈ ಮಾದೋಡಿ
ಕಾಣಿಯೂರು: ಆ.1ರಿಂದ ಆ.8ರ ತನಕ ಕಾಣಿಯೂರು ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂದಿರದಲ್ಲಿ ನಡೆದ 1700ನೇ ಮದ್ಯವರ್ಜನ ಶಿಬಿರವು ಯಶಸ್ವಿಯಾಗಿ ಸಂಪನ್ನಗೊಂಡಿದೆ. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಕಡಬ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಬೆಳ್ತಂಗಡಿ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು, ತಾಲೂಕು ಜನಜಾಗೃತಿ ವೇದಿಕೆ ಕಡಬ, ಮದ್ಯವರ್ಜನಾ ಶಿಬಿರ ವ್ಯವಸ್ಥಾಪನಾ ಸಮಿತಿ ಕಾಣಿಯೂರು, ಗ್ರಾಮ ಪಂಚಾಯತ್ ಕಾಣಿಯೂರು, ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂಡಳಿ ಕಾಣಿಯೂರು, ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟಗಳು ಸವಣೂರು ವಲಯ, ನವಜೀವನ ಸಮಿತಿ ಮತ್ತು ಸ್ಥಳೀಯ ಸಂಘ ಸಂಸ್ಥೆಗಳು ಹಾಗೂ ಸಾರ್ವಜನಿಕರ ಸಹಯೋಗದಲ್ಲಿ ಕಾಣಿಯೂರು ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂದಿರದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನ ಮುಕ್ತಿ ಮತ್ತು ಸಂಶೋಧನಾ ಕೇಂದ್ರ ಲಾಲ ಬೆಳ್ತಂಗಡಿ ಇದರ ವಿಸ್ತರಣಾ ಕಾರ್ಯಕ್ರಮದ ಅಂಗವಾಗಿ ಜರಗುವ 1700ನೇ ಮದ್ಯಮರ್ಜನಾ ಶಿಬಿರವನ್ನು ಸಂಘಟಿಸಲಾಗಿತ್ತು.
ಸಮಾರೋಪ ಸಮಾರಂಭ: ಆ.8ರಂದು ನಡೆದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಮದ್ಯವರ್ಜನ ಶಿಬಿರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಉದಯ ರೈ ಮಾದೋಡಿಯವರು, ಮದ್ಯವರ್ಜನ ಶಿಬಿರದಿಂದ ಸಾಮರಸ್ಯದ ವಾತಾವರಣ ನಿರ್ಮಾಣವಾಗಿದ್ದು, ಧರ್ಮಸ್ಥಳ ಕ್ಷೇತ್ರದ ವತಿಯಿಂದ ನಡೆಯುತ್ತಿರುವ ಇಂತಹ ಶಿಬಿರಗಳಿಂದ ಇದು ಸಾಧ್ಯವಾಗಿದೆ. ಶ್ರೀ.ಕ್ಷೇ.ಧ.ಗ್ರಾ.ಯೋಜನೆಯಿಂದ ಹಲವಾರು ಜನಪರ ಕಾರ್ಯಕ್ರಮಗಳು ನಡೆಯುತ್ತಿದೆ. ಎಲ್ಲರ ಸಹಕಾರದಿಂದ ಇಡೀ ಊರೇ ಪಾಲ್ಗೊಂಡ ಈ ಶಿಬಿರ ಯಶಸ್ವಿಯಾಗಿ ನಡೆದಿದೆ ಎಂದರು.
ಉಡುಪಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಾದೇಶಿಕ ನಿರ್ದೇಶಕ ದುಗ್ಗೇ ಗೌಡ, ದಕ್ಷಿಣ ಕನ್ನಡ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಜಿಲ್ಲಾಧ್ಯಕ್ಷ ಪದ್ಮನಾಭ ಶೆಟ್ಟಿ, ಪುತ್ತೂರು ವಕೀಲರ ಸಂಘದ ಮಾಜಿ ಅಧ್ಯಕ್ಷ ಕೆ. ಭಾಸ್ಕರ ಕೋಡಿಂಬಾಳ, ಕಡಬ ತಾಲೂಕು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಉಪಾಧ್ಯಕ್ಷ ಸೀತಾರಾಮ ಪೊಸವಳಿಕೆ, ಕಡಬ ತಾಲೂಕು ಪ್ರಗತಿಬಂಧು ಸ್ವಸಹಾಯ ಸಂಘಗಳ ಅಧ್ಯಕ್ಷ ಸಂತೋಷ್ ಕೆ, ಕಾಣಿಯೂರು ಗ್ರಾ.ಪಂ.ಅಧ್ಯಕ್ಷೆ ಲಲಿತಾ ದರ್ಖಾಸು, ಗ್ರಾ.ಪಂ.ಉಪಾಧ್ಯಕ್ಷ ಗಣೇಶ್ ಉದನಡ್ಕ, ಕಾಣಿಯೂರು ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂಡಳಿ ಗೌರವಾಧ್ಯಕ್ಷ ಚಿದಾನಂದ ಉಪಾಧ್ಯಾಯ ಕಲ್ಪಡ, ಶ್ರೀ.ಕ್ಷೇ.ಧ.ಗ್ರಾ.ಯೋಜನೆಯ ಬಿ.ಸಿ ಟ್ರಸ್ಟ್ ನ ಜಿಲ್ಲಾ ನಿರ್ದೇಶಕ ಪ್ರವೀಣ್ ಕುಮಾರ್, ಉಡುಪಿ ಪ್ರಾದೇಶಿಕ ಕಚೇರಿಯ ಜನಜಾಗೃತಿ ವೇದಿಕೆಯ ಯೋಜನಾಧಿಕಾರಿ ಗಣೇಶ್ ಆಚಾರ್ಯ, ಕಾಣಿಯೂರು ಮದ್ಯವರ್ಜನಾ ಶಿಬಿರದ ವ್ಯವಸ್ಥಾಪನಾ ಸಮಿತಿ ಗೌರವಾಧ್ಯಕ್ಷ ಪದ್ಮಯ್ಯ ಗೌಡ ಅನಿಲ, ಯೋಜನೆಯ ಸವಣೂರು ವಲಯಾಧ್ಯಕ್ಷ ರಾಮಚಂದ್ರ ಇಡ್ಯಡ್ಕ, ಶ್ರೀ ಕಾಣಿಯೂರು ಒಕ್ಕೂಟದ ಅಧ್ಯಕ್ಷ ಕುಸುಮಾಧರ ಗೌಡ ಅನಿಲ, ಶಿಬಿರಾಧಿಕಾರಿ ದೇವಿಪ್ರಸಾದ್, ಕಾಣಿಯೂರು ಶ್ರೀ ಲಕ್ಷ್ಮೀನರಸಿಂಹ ಯುವಕ ಮಂಡಲದ ಅಧ್ಯಕ್ಷ ರಾಜೇಶ್ ಮೀಜೆ, ಸವಣೂರು ವಲಯ ಮೇಲ್ವಿಚಾರಕಿ ಹರ್ಷಕುಮಾರಿ, ನೆಲ್ಯಾಡಿ ವಲಯ ಜನಜಾಗೃತಿ ವೇದಿಕೆಯ ಅಧ್ಯಕ್ಷ ಜಯಾನಂದ ಬಂಟ್ರಿಯಾಲ್ ಉಪಸ್ಥಿತರಿದ್ದರು. ವೇಣುಗೋಪಾಲ ಕಳುವಾಜೆ, ಜಯಂತ ಅಬೀರ, ಲಕ್ಷ್ಮಣ ಗೌಡ ಮುಗರಂಜ, ರಾಮಣ್ಣ ಗೌಡ ಮುಗರಂಜ, ಪುಟ್ಟಣ್ಣ ಗೌಡ ಮುಗರಂಜ, ಹರ್ಷಾ ಕುಮಾರಿ, ವಸಂತ ಪೆರ್ಲೋಡಿ, ಸುರೇಶ್ ಓಡಬಾಯಿ, ಪರಮೇಶ್ವರ ಅನಿಲ, ಅಶೋಕ್ ಗೌಡ ಪಿ, ಸುಬ್ರಹ್ಮಣ್ಯ ದೋಳ್ಪಾಡಿ, ಶೇಷಪ್ಪ ಅಬೀರ, ರಕ್ಷಕ್, ಕಾವ್ಯ ಅತಿಥಿಗಳಿಗೆ ಹೂ ನೀಡಿ, ಶಾಲು ಹಾಕಿ ಗೌರವಿಸಿದರು. ಶಿಬಿರಾರ್ಥಿ ಅರುಣ್ ಕುಮಾರ್ ಅನಿಸಿಕೆ ವ್ಯಕ್ತಪಡಿಸಿದರು. ಕಡಬ ತಾಲೂಕು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಅಧ್ಯಕ್ಷ, ನ್ಯಾಯವಾದಿ ಮಹೇಶ್ ಕೆ. ಸವಣೂರು ಸ್ವಾಗತಿಸಿ, ಕಡಬ ತಾಲೂಕು ಯೋಜನಾಧಿಕಾರಿ ಮೇದಪ್ಪ ನಾವೂರು ವಂದಿಸಿದರು. ಮೇಲ್ವಿಚಾರಕ ರವಿಪ್ರಸಾದ್ ಕಾರ್ಯಕ್ರಮ ನಿರೂಪಿಸಿದರು.
ಸನ್ಮಾನ, ಗೌರವ: ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಉದಯ ರೈ ಮಾದೋಡಿ, ಗೌರವಾಧ್ಯಕ್ಷ ಪದ್ಮಯ್ಯ ಗೌಡ ಅನಿಲ, ಕಡಬ ತಾಲೂಕು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಅಧ್ಯಕ್ಷ ಮಹೇಶ್ ಕೆ. ಸವಣೂರು, ಉಡುಪಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಾದೇಶಿಕ ನಿರ್ದೇಶಕ ದುಗ್ಗೇ ಗೌಡ, ಪ್ರಾದೇಶಿಕ ಯೋಜನಾಧಿಕಾರಿ ಗಣೇಶ್ ಆಚಾರ್ಯ, ಯೋಜನಾಧಿಕಾರಿ ಮೇದಪ್ಪ ಗೌಡ ನಾವೂರು, ಶಿಬಿರಾಧಿಕಾರಿ ದೇವಿಪ್ರಸಾದ್, ಮೆಡಿಷಿನ್ ಉಚಿತವಾಗಿ ನೀಡಿರುವ ಉದಯ ಆಚಾರ್ಯ ಬಲ್ಯ, ಸವಣೂರು ವಲಯ ಮೇಲ್ವಿಚಾರಕಿ ಹರ್ಷಕುಮಾರಿ, ಆರೋಗ್ಯ ಸಹಾಯಕಿ ಪ್ರೆಸಿಲ್ಲ ಡಿ’ಸೋಜ, ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಶೋಕ್ ಗೌಡ, ಶಿಕ್ಷಕ ಜಯಂತ್ ವೈ ಅವರನ್ನು ಸನ್ಮಾನಿಸಲಾಯಿತು. ಹಾಗೂ ಮೇಲ್ವಿಚಾರಕರು, ಸೇವಾಪ್ರತಿನಿಧಿಗಳು, ವ್ಯವಸ್ಥಾಪನಾ ಸಮಿತಿ ಪದಾಧಿಕಾರಿಗಳು, ಸಂಘ ಸಂಸ್ಥೆಗಳ ಪದಾಧಿಕಾರಿಗಳನ್ನು, ನವಜೀವನ ಸಮಿತಿ ಸದಸ್ಯರನ್ನು ಗೌರವಿಸಲಾಯಿತು. ಶಿಬಿರಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದ್ದು, ವಿಜೇತರಾದ ಶಿಬಿರಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
ಭಗವದ್ಗೀತೆ ಪುಸ್ತಕ ಹಸ್ತಾಂತರ: ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಅಶೋಕ್ ಗೌಡ ಮತ್ತು ಸವಣೂರು ಪ್ರಾಥಮಿಕ ಕೃಷಿಪ ಪತ್ತಿನ ಸಹಕಾರ ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಚಂದ್ರಶೇಖರ್ ಅವರು ಶಿಬಿರಾರ್ಥಿಗಳಿಗೆ ನೀಡಿರುವ ಭಗವದ್ಗೀತೆ ಪುಸ್ತಕವನ್ನು ಹಸ್ತಾಂತರಿಸಲಾಯಿತು.

ಕಾಣಿಯೂರು ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂದಿರದಲ್ಲಿ 8 ದಿವಸಗಳ ಕಾಲ ನಡೆದ ಮದ್ಯವರ್ಜನ ಶಿಬಿರದಲ್ಲಿ ಸುಮಾರು 64 ಮಂದಿ ಶಿಬಿರಾರ್ಥಿಗಳು ಭಾಗವಹಿಸಿದ್ದರು. ಪ್ರತಿದಿನ ಬೆಳಿಗ್ಗೆ ಶಿಕ್ಷಕ ಜಯಂತ್ ವೈ ನೇತೃತ್ವದಲ್ಲಿ ಯೋಗಾಸನ ನಡೆಯಿತು. ಪ್ರತಿದಿನ ಸಂಜೆ ವಿವಿಧ ಭಜನಾ ತಂಡಗಳಿಂದ ಭಜನೆ, ಕುಣಿತ ಭಜನಾ ಕಾರ್ಯಕ್ರಮ, ವಿವಿಧ ಗಣ್ಯರಿಂದ ಗುಂಪು ಸಲಹೆ, ಕೌಟುಂಬಿಕ ಸಲಹೆ, ಗಣ್ಯರಿಂದ ಮಾಹಿತಿ- ಮಾರ್ಗದರ್ಶನ, ನವಜೀವನ ಸಮಿತಿ ಸದಸ್ಯರಿಂದ ಅನಿಸಿಕೆ, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ, ಶಾರೀರಿಕ ಗುಂಪು ಚಟುವಟಿಕೆ ನಡೆಯಿತು. ಆ.7ರಂದು ಭಜನಾ ಮಂಗಳೋತ್ಸವ, ಶಿಬಿರಾಗ್ನಿ, ವಿದಾಯ ಸಂಜೆ ನಡೆಯಿತು. ಆ.8ರಂದು ಪ್ರಾದೇಶಿಕ ನಿರ್ದೇಶಕ ವಿವೇಕ್ ವಿನ್ಸೆಂಟ್ ಪಾಯಸ್, ಪ್ರಾದೇಶಿಕ ಯೋಜನಾಧಿಕಾರಿ ಗಣೇಶ್ ಆಚಾರ್ಯರವರಿಂದ ಕುಟುಂಬ ದಿನ ಕಾರ್ಯಕ್ರಮ, ನವಜೀವನ ಸಮಿತಿ ರಚನೆ, ಮಾಹಿತಿ ನಡೆಯಿತು. ಆರೋಗ್ಯ ಸಹಾಯಕಿ ಪ್ರೆಸಿಲ್ಲ ಡಿ’ಸೋಜರವರ ನೇತೃತ್ವದಲ್ಲಿ ಶಿಬಿರದಲ್ಲಿ ಆರೋಗ್ಯ ತಪಾಸಣೆ ನಡೆಯಿತು.

LEAVE A REPLY

Please enter your comment!
Please enter your name here