ಪುತ್ತೂರು: ಪುಣಚ ಗ್ರಾಮ ಪಂಚಾಯತ್ನ ಎರಡನೇ ಅವಧಿಗೆ ಅಧ್ಯಕ್ಷರಾಗಿ ಯಶೋಧಾ ಯಾನೆ ಬೇಬಿ ಪಟಿಕಲ್ಲು, ಉಪಾಧ್ಯಕ್ಷರಾಗಿ ಮಹೇಶ್ ಶೆಟ್ಟಿ ಬೈಲುಗುತ್ತುರವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಒಟ್ಟು 20 ಮಂದಿ ಸದಸ್ಯರನ್ನೊಳಗೊಂಡ ಪುಣಚ ಗ್ರಾಮ ಪಂಚಾಯತ್ನಲ್ಲಿ 18 ಮಂದಿ ಬಿಜೆಪಿ ಬೆಂಬಲಿತ ಹಾಗೂ 2 ಮಂದಿ ಕಾಂಗ್ರೆಸ್ ಬೆಂಬಲಿತ ಸದಸ್ಯರಿದ್ದಾರೆ. ಎರಡನೇ ಅವಧಿಗೆ ಅಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ವರ್ಗ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಪುರುಷ ಮೀಸಲಾತಿ ಪ್ರಕಟಗೊಂಡಿತ್ತು. ಅದರಂತೆ ಆ.11 ರಂದು ಆಯ್ಕೆ ಪ್ರಕ್ರಿಯೆ ನಡೆಯಿತು.
ಚುನಾವಣಾ ಅಧಿಕಾರಿಯಾಗಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಬಿಂದ್ಯಾ ಚುನಾವಣಾ ಪ್ರಕ್ರಿಯೆ ನಡೆಸಿಕೊಟ್ಟರು. ಗ್ರಾಪಂ ಅಭಿವೃದ್ಧಿ ಅಧಿಕಾರಿ ರವಿ, ದ್ವಿತೀಯ ದರ್ಜೆ ಲೆಕ್ಕ ಸಹಾಯಕಿ ಪಾರ್ವತಿ ಸಹಕರಿಸಿದ್ದರು. ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಯಶೋಧಾ ಯಾನೆ ಬೇಬಿ ಮತ್ತು ಮಹೇಶ್ ಶೆಟ್ಟಿ ಇಬ್ಬರೇ ನಾಮಪತ್ರ ಸಲ್ಲಿಸಿದ್ದು ಅವಿರೋಧ ಆಯ್ಕೆ ನಡೆದಿದೆ.
ಈ ಸಂದರ್ಭದಲ್ಲಿ ಗ್ರಾಪಂ ಅಧ್ಯಕ್ಷ ರಾಮಕೃಷ್ಣ ಬಿ, ಉಪಾಧ್ಯಕ್ಷೆ ಪ್ರತಿಭಾ ಜಗನ್ನಾಥ ಗೌಡ, ಸದಸ್ಯರುಗಳಾದ ಲಲಿತಾ, ಗಿರಿಜ, ಗಂಗಮ್ಮ, ರವಿ, ಹರೀಶ್ ಪೂಜಾರಿ, ಸರೋಜಿನಿ, ಸುಜಾತ, ಉದಯ ದಂಬೆ, ರೇಖಾ, ತೀರ್ಥಾರಾಮ, ಅಶೋಕ್ ಕುಮಾರ್, ಆನಂದ ನಾಯ್ಕ, ವಾಣಿಶ್ರೀ, ರಾಜೇಶ್ ನಾಯ್ಕ, ಶಾರದಾ,ರೇಷ್ಮಾ ಉಪಸ್ಥಿತರಿದ್ದರು. ಗ್ರಾಪಂ ಸಿಬ್ಬಂದಿಗಳಾದ ಮಮತಾ ಕಜೆಮಾರ್, ಸತ್ಯಪ್ರಕಾಶ್, ಉಸ್ಮಾನ್, ಅಭಿಷೇಕ್, ರೇಷ್ಮಾ ಕೂರೇಲು, ಮುರಳೀಧರ ಸಹಕರಿಸಿದ್ದರು.