ವಿಟ್ಲ: ವಿಠಲ್ ಜೇಸೀಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆರೋಗ್ಯ ಮತ್ತು ವಿಜ್ಞಾನ ಸಂಘದ ವತಿಯಿಂದ ವಿದ್ಯಾರ್ಥಿಗಳಿಗೆ ಪೋಕ್ಸೋ ಕಾಯ್ದೆಯ ಬಗ್ಗೆ ಜಾಗೃತಿ ಕಾರ್ಯಗಾರ ಆ.11ರಂದು ನಡೆಯಿತು.
ವಿಟ್ಲ ಪೊಲೀಸ್ ಠಾಣೆಯ ಎಸ್.ಐ. ವಿದ್ಯಾರವರು ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿ ಮಕ್ಕಳ ಸುರಕ್ಷತೆಯ ಬಗ್ಗೆ ಜಾಗೃತಿ ಮೂಡಿಸಿದರು.
ಕಾರ್ಯಕ್ರಮದಲ್ಲಿ ಹೆಡ್ ಕಾನ್ಸ್ಟೇಬಲ್ ಚಿತ್ರಲೇಖ, ಶಾಲಾ ಪ್ರಾಂಶುಪಾಲರಾದ ಜಯರಾಮ್ ರೈ, ಉಪ ಪ್ರಾಂಶುಪಾಲರಾದ ಜ್ಯೋತಿ ಶೈಣೆ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಫಾತಿಮಾ ರಾಶಿಫಾ ನಿರೂಪಿಸಿ, ಶೈಮ ಸ್ವಾಗತಿಸಿ, ನಿವೇದಿತಾ ವಂದಿಸಿದರು.