ಬೆಳ್ಳಾರೆ ನೂತನ ಎಸ್‌ ಐ ಸಂತೋಷ್ ಅಧಿಕಾರ ಸ್ವೀಕಾರ

0

ಕಾಣಿಯೂರು: ಬೆಳ್ಳಾರೆ ಪೊಲೀಸ್ ಠಾಣೆಯ ನೂತನ ಪೊಲೀಸ್ ಉಪನಿರೀಕ್ಷಕ ಸಂತೋಷ್ ಬಿ.ಪಿ. ಅವರು ಠಾಣೆಗೆ ಆಗಮಿಸಿ ಅಧಿಕಾರ ವಹಿಸಿಕೊಂಡಿದ್ದಾರೆ.


ಬೆಳ್ತಂಗಡಿ ಸಂಚಾರ ಠಾಣೆಯಲ್ಲಿ ಉಪನಿರೀಕ್ಷಕರಾಗಿದ್ದ ಅವರು ಬೆಳ್ಳಾರೆ ಠಾಣೆಯ ಎಸ್‌ಐಯಾಗಿ ವರ್ಗಾವಣೆಗೊಂಡಿದ್ದಾರೆ. ಸುಳ್ಯದಲ್ಲಿ ಪ್ರೊಬೆಷನರಿ ಎಸ್‌ಐ ಆಗಿ ಕರ್ತವ್ಯ ನಿರ್ವಹಿಸಿದ್ದ ಸಂತೋಷ್ ಬಂಟ್ವಾಳ ನಗರ, ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿದ್ದರು. ಇವರು ಮೂಲತ: ಮೈಸೂರು ಜಿಲ್ಲೆಯವರು. ಬೆಳ್ಳಾರೆ ಎಸೈಯಾಗಿದ್ದ ಸುಹಾಸ್ ಅವರನ್ನು ಇತ್ತೀಚೆಗೆ ವರ್ಗಾವಣೆ ಮಾಡಲಾಗಿತ್ತು.

LEAVE A REPLY

Please enter your comment!
Please enter your name here