ಪುತ್ತೂರು:ಕುಡಿಪ್ಪಾಡಿ ಗ್ರಾಮ ಪಂಚಾಯತ್ ನ 2ನೇ ಅವಧಿಗೆ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆಗಳು ಆ.14ರಂದು ನಡೆದಿದ್ದು, ಅಧ್ಯಕ್ಷರಾಗಿ ಸೋಮಪ್ಪ ಪೂಜಾರಿ ಓಜಾಳ ಹಾಗೂ ಉಪಾಧ್ಯಕ್ಷೆಯಾಗಿ ಹಾಲಿ ಅಧ್ಯಕ್ಷೆ ರೇಖಾ ಬಟ್ರುಪ್ಪಾಡಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಒಟ್ಟು 8 ಮಂದಿ ಸದಸ್ಯ ಸ್ಥಾನಗಳನ್ನು ಹೊಂದಿರುವ ಪಂಚಾಯತ್ ನಲ್ಲಿ ಎಲ್ಲಾ8 ಸ್ಥಾನಗಳಲ್ಲಿಯೂ ಬಿಜೆಪಿ ಬೆಂಬಲಿತ ಸದಸ್ಯರನ್ನು ಹೊಂದಿದೆ. ಸಾಮಾನ್ಯ ಮೀಸಲಾತಿಯ ಅಧ್ಯಕ್ಷ ಸ್ಥಾನಕ್ಕೆ ಸೋಮಪ್ಪ ಪೂಜಾರಿ ಹಾಗೂ ಪ.ಜಾತಿ ಮೀಸಲಾತಿಯ ಉಪಾಧ್ಯಕ್ಷ ಸ್ಥಾನಕ್ಕೆ ಹಾಲಿ ಅಧ್ಯಕ್ಷೆ ರೇಖಾ ಬಟ್ರುಪ್ಪಾಡಿಯವರ ಮಾತ್ರ ನಾಮಪತ್ರ ಸಲ್ಲಿಸಿದ್ದು, ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಸೋಮಪ್ಪ ಪೂಜಾರಿಯವರಿಗೆ ಗಿರಿಧರ ಗೋಮುಖ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದ ರೇಖಾ ಬಟ್ರುಪ್ಪಾಡಿಯವರಿಗೆ ಗಿರೀಶ್ ನಂದನ ಸೂಚಕರಾಗಿದ್ದರು. ಸದಸ್ಯರಾದ ಸಮಿತ್ರ, ಸ್ಮಿತಾ, ಚಂದ್ರಾವತಿ ಹಾಗೂ ನವೀನ್ ಉಪಸ್ಥಿತರಿದ್ದರು.
ಸಹಕಾರ ಸಂಘಗಳ ಸಹಾಯಕ ನಿಬಂಧಕಿ ತ್ರಿವೇಣಿ ರಾವ್ ಚುನಾವಣಾಧಿಕಾರಿಯಾಗಿದ್ದರು. ಪಿಡಿಓ ಶರೀಫ್, ಕಾರ್ಯದರ್ಶಿ ಭವಾನಿ ಹಾಗೂ ಸಿಬಂದಿಗಳು ಸಹಕರಿಸಿದರು.