ಮುಂಡೂರು ಗ್ರಾಮ ಪಂಚಾಯತ್‌ನಲ್ಲಿ ಸ್ವಾತಂತ್ರ್ಯ ದಿನಾಚರಣೆ

0

ಪುತ್ತೂರು: ಮುಂಡೂರು ಗ್ರಾಮ ಪಂಚಾಯತ್‌ನಲ್ಲಿ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಗ್ರಾ.ಪಂ ಅಧ್ಯಕ್ಷೆ ಪುಷ್ಪಾ ಎನ್ ಅವರು ಧ್ವಜಾರೋಹಣ ನೆರವೇರಿಸಿ ಶುಭ ಹಾರೈಸಿದರು. ಮುಂಡೂರು ಶಾಲಾ ವಿದ್ಯಾರ್ಥಿಗಳು ಮೆರವಣಿಗೆಯೊಂದಿಗೆ ಆಗಮಿಸಿ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಗ್ರಾ.ಪಂ ಪರವಾಗಿ ಕಾರ್ಯದರ್ಶಿ ಸೂರಪ್ಪ, ಸದಸ್ಯರಾದಂತಹ ಅಶೋಕ್ ಕುಮಾರ್ ಪುತ್ತಿಲ ಮಾತನಾಡಿದರು. ಮುಂಡೂರು ಶಾಲಾ ಮುಖ್ಯಗುರು ವಿಜಯಾ, ಎಸ್‌ಡಿಎಂಸಿ ಅಧ್ಯಕ್ಷ ರಮೇಶ್ ಗೌಡ ಪಜಿಮಣ್ಣು ಹಾಗೂ ಗ್ರಾ.ಪಂ ಸದಸ್ಯರು, ಸ್ವಸಹಾಯ ಸಂಘದ ಸದಸ್ಯರು, ಊರವರು. ಗ್ರಾ.ಪಂ ಸಿಬ್ಬಂದಿಗಳು ಉಪಸ್ಥಿತರಿದ್ದರು. ಗ್ರಾ.ಪಂ ಕ್ಲರ್ಕ್ ಶಶಿಧರ್ ಕೆ ಮಾವಿನಕಟ್ಟೆ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

LEAVE A REPLY

Please enter your comment!
Please enter your name here