ಕೊಂಬೆಟ್ಟು ಶಾಲೆಯಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆ

0

ಪುತ್ತೂರು: ಕೊಂಬೆಟ್ಟು ಸರಕಾರಿ ಪದವಿ ಪೂರ್ವ ಕಾಲೇಜುನಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣವನ್ನು ಶಾಸಕ ಅಶೋಕ್ ಕುಮಾರ್ ರೈ ನೆರವೇರಿಸಿದರು.
ಕಾಲೇಜು ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷ ಪ್ರಸಾದ್ ಕೌಶಲ್ ಶೆಟ್ಟಿ, ನಗರಸಭಾ ಸ್ಥಳೀಯ ಸದಸ್ಯ ಪಿ.ಜಿ. ಜಗನ್ನಿವಾಸ ರಾವ್, ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ಶಿಕ್ಷಕ ಕೋಟಿಯಪ್ಪ ಪೂಜಾರಿ ಸೇರ, ನಿವೃತ್ತ ಉಪನ್ಯಾಸಕ ದೇವದಾಸ್ ಗೌಡ, ಕಾಲೇಜ್ ಅಭಿವೃದ್ಧಿ ಸಮಿತಿ ಹಾಗೂ ಶಾಲಾ ಅಭಿವೃದ್ಧಿ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

ಸ್ವಾತಂತ್ರ್ಯ ದಿನಾಚರಣೆಯ ಕುರಿತು ನಡೆದ ವಿವಿಧ ಸ್ಪರ್ಧೆಗಳ ಬಹುಮಾನಗಳನ್ನು ಇದೇ ಸಂದರ್ಭದಲ್ಲಿ ವಿತರಿಸಲಾಯಿತು. ಪ್ರಾಂಶುಪಾಲ ಧರಣಪ್ಪ ಗೌಡ ಸ್ವಾಗತಿಸಿದರು. ಉಪ ಪ್ರಾಂಶುಪಾಲ ವಸಂತ ಮೂಲ್ಯ ವಂದಿಸಿದರು. ಎನ್.ಸಿ.ಸಿ ಅಧಿಕಾರಿ ಗ್ರೆಗೋರಿ ರೋನಿ ಪಾಯಸ್ ನೇತೃತ್ವದಲ್ಲಿ ಆಕರ್ಷಕ ಪಥ ಸಂಚಲನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಪ್ರಾಚಾರ್ಯರು, ಶಿಕ್ಷಕರು, ಕಛೇರಿ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಕಾರ್ಯಕ್ರಮದ ಬಳಿಕ ಸಿಹಿ ತಿಂಡಿ ವಿತರಿಸಲಾಯಿತು.

LEAVE A REPLY

Please enter your comment!
Please enter your name here