ಪುತ್ತೂರು: ತಾಲ್ಲೂಕು ಮಹಿಳಾ ಬಂಟರ ಸಂಘದ ವತಿಯಿಂದ ದಾನಿಗಳ ನೆರವಿನಿಂದ ಸಂಗ್ರಹಗೊಂಡ ಒಂದು ಲಕ್ಷ ರೂಪಾಯಿಯನ್ನು ಪರ್ಪುಂಜ ಬಾಳೆಹಿತ್ಲು ಬಾಲಕೃಷ್ಣ ರೈ-ಪರಮೇಶ್ವರಿ ದಂಪತಿ ಪತ್ರಿ ಪ್ರೀಯಾರವರ ವಿವಾಹ ಕಾರ್ಯಕ್ಕೆ ನೀಡಲಾಯಿತು.
ತಾಲ್ಲೂಕು ಮಹಿಳಾ ಬಂಟರ ಸಂಘದ ಅಧ್ಯಕ್ಷೆ ಸಬಿತಾ ಭಂಡಾರಿ, ಮಾಜಿ ಅಧ್ಯಕ್ಷೆಯಾಗಿರುವ ಪುತ್ತೂರು ಕ್ಷೇತ್ರದ ಮಾಜಿ ಶಾಸಕಿ ಮಲ್ಲಿಕಾ ಪ್ರಸಾದ್, ಉದ್ಯಮಿ ಸುಮ ಅಶೋಕ್ ಕುಮಾರ್ ರೈ ಕೋಡಿಂಬಾಡಿ, ತಾಲೂಕು ಬಂಟರ ಸಂಘದ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು, ಬಂಟರ ಸಂಘದ ಮಾಜಿ ಅಧ್ಯಕ್ಷ ಸವಣೂರು ಕೆ.ಸೀತಾರಾಮ ರೈ, ಬಂಟರ ಯಾನೆ ನಾಡವರ ಮಾತೃ ಸಂಘದ ಉಪಾಧ್ಯಕ್ಷ ಕಾವು ಹೇಮನಾಥ ಶೆಟ್ಟಿ, ಮಾತೃ ಸಂಘದ ತಾಲ್ಲೂಕು ಸಮಿತಿ ಸಂಚಾಲಕ ದಯಾನಂದ ರೈ ಮನವಳಿಕೆಗುತ್ತು, ಸಹಸಂಚಾಲಕ ಜಯಪ್ರಕಾಶ್ ರೈ ನೂಜಿಬೈಲು, ಬಂಟರ ಸಂಘದ ಮಾಜಿ ಅಧ್ಯಕ್ಷ ಬೂಡಿಯಾರ್ ರಾಧಾಕೃಷ್ಣ ರೈ, ಕೋಶಾಧಿಕಾರಿ ಕೃಷ್ಣ ಪ್ರಸಾದ್ ಆಳ್ವ ಉಪ್ಪಳಿಗೆ, ಯುವ ಬಂಟರ ಸಂಘದ ಅಧ್ಯಕ್ಷ ಶಶಿರಾಜ್ ರೈ, ವಿದ್ಯಾರ್ಥಿ ಬಂಟರ ಸಂಘದ ಅಧ್ಯಕ್ಷ ಪವನ್ ಶೆಟ್ಟಿ, ತಾಲ್ಲೂಕು ಮಹಿಳಾ ಬಂಟರ ಸಂಘದ ಉಪಾಧ್ಯಕ್ಷರುಗಳು, ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು. ತಾಲ್ಲೂಕು ಮಹಿಳಾ ಬಂಟರ ಸಂಘದ ಪ್ರಧಾನ ಕಾರ್ಯದರ್ಶಿ ಹರಿಣಾಕ್ಷಿ ಜೆ.ಶೆಟ್ಟಿ ಸ್ವಾಗತಿಸಿ, ಕೋಶಾಧಿಕಾರಿ ವಾಣಿ ಶೆಟ್ಟಿ ವಂದಿಸಿದರು.