ಧ್ವಜಾರೋಹಣ ಮತ್ತು ಸಭಾ ಕಾರ್ಯಕ್ರಮ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ
ಉಪ್ಪಿನಂಗಡಿ: ಆ 15; ಕೆಮ್ಮಾರ ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಡಗರ ಸಂಭ್ರಮದ ಸ್ವಾತಂತ್ರ್ಯೊತ್ಸವ ಕಾರ್ಯಕ್ರಮ ನಡೆಯಿತು.
ಬೆಳಿಗ್ಗೆ 9 ಗಂಟೆಗೆ ಸರಿಯಾಗಿ ಶಾಲಾ ಮಕ್ಕಳು, ನಾಗರಿಕರ ಸಮ್ಮುಖದಲ್ಲಿ ಶಾಲಾಭಿವೃಧ್ದಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷರಾದ ಅಝೀಝ್ ಬಿ.ಕೆ ಧ್ವಜಾರೋಹಣಗೈದರು.
ಶಾಲಾ ಮಕ್ಕಳಿಂದ ರಾಷ್ಟ್ರಗೀತೆ ಮತ್ತು ಸಂವಿಧಾನ ಪೀಠಿಕೆಯನ್ನು ಬೋಧಿಸಿದರು.
ಕಾರ್ಯಕ್ರಮವನ್ನು ಸ್ವಾಗತಿಸಿದ ಶಾಲಾ ಮುಖ್ಯ ಶಿಕ್ಷಕಿ ಜಯಶ್ರಿ ಎಂ. ಪ್ರಾಸ್ತಾವಿಕವಾಗಿ ಮಾತನಾಡಿದರು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಶಾಲಾಭಿವೃಧ್ದಿ ಸಮಿತಿ ಅಧ್ಯಕ್ಷ ಅಝೀಝ್ ಬಿ.ಕೆ ಸ್ವಾತಂತ್ರ್ಯ ಹೋರಾಟದಲ್ಲಿ ಮಡಿದ ವೀರ ಸೇನಾನಿಗಳನ್ನು ಸ್ಮರಿಸಿಕೊಳ್ಳುವ ಜೊತೆಗೆ ಶುಭಕೊರಿದರು.
ಇದೇ ಸಂದರ್ಭದಲ್ಲಿ ಹಿರೆಬಂಡಾಡಿ ಗ್ರಾಮ ಪಂಚಾಯತ್ ಸದಸ್ಯೆರುಗಳಾದ ವಾರಿಜಾಕ್ಷಿ ಬಡ್ಡಮೆ ಮತ್ತು ಉಷಾ, ಉಪಾಧ್ಯಕ್ಷೆ ತೇಜಾವತಿ , ಕೆಮ್ಮಾರ ಕುತುಬಿಯಾ ಮದ್ರಸ ಧರ್ಮಗುರುಗಳಾದ ಶರೀಫ್ ಸಖಾಫಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮೋಹನದಾಸ ಶೆಟ್ಟಿ ಬಡಿಲ, ವಕೀಲರಾದ ಕಬೀರ್ ಕೆಮ್ಮಾರ, ದುರ್ಗಾಪರಮೇಶ್ವರೀ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಸಂಜೀವ ಬಡ್ಡಮೆ, ಕೆಮ್ಮಾರ ಮೊಹಿಯುದ್ದೀನ್ ಜುಮಾ ಮಸ್ಜಿದ್ ಅಧ್ಯಕ್ಷರಾದ ರಶೀದ್ ಹಾಜಿ ಬಡ್ಡಮೆ, ಕವಿ ಬರಹಗಾರ ಅಬ್ದುಲ್ ಗಫ್ಫಾರ್ ಕೆಮ್ಮಾರ ಸೇರಿದಂತೆ ಹಲವರು ದೇಶದ ಸ್ವಾತಂತ್ರ್ಯದ ಸಂದೇಶವನ್ನು ಸಾರಿದರು.
ಅದೇ ರೀತಿ ಶಾಲಾ ಮಕ್ಕಳಿಂದ ದೇಶ ಭಕ್ತಿ ಸಾರುವ ಹಲವಾರು ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು ಮತ್ತು ಸರ್ವರಿಗೂ ಸಿಹಿತಿಂಡಿಗಳನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಅಧ್ಯಾಪಕ ವೃಂದ, ಪೋಷಕರು, ಅಕ್ಷರ ದಾಸೋಹ ಸಿಬ್ಬಂದಿಗಳು ಸೇರಿದಂತೆ ಊರಿನ ಹಲವಾರು ನಾಗರಿಕರು, ಮಹಿಳೆಯರು ಪಾಲ್ಗೊಂಡಿದ್ದರು.
ಕಾರ್ಯಕ್ರಮವನ್ನು ಸುಮನಾ ಮತ್ತು ಸಂಧ್ಯಾ ನಿರೂಪಿಸಿದರು. ದೈಹಿಕ ಶಿಕ್ಷಣ ಶಿಕ್ಷಕಿ ಮೋಹನಾಂಗಿ ಧನ್ಯವಾದಗೈದರು.