ಪುತ್ತೂರು: ಬಲ್ನಾಡು ಗ್ರಾಮ ಪಂಚಾಯತ್ ನ ಎರಡನೇ ಅವಧಿಗೆ ಬಿಜೆಪಿ ಬೆಂಬಲಿತರು ಅವಿರೋಧವಾಗಿ ಆಯ್ಕೆಯಾಗಿದ್ದು ಅಧ್ಯಕ್ಷೆಯಾಗಿ ಪರಮೇಶ್ವರಿ ಭಟ್ ಬಬ್ಬಿಲಿ ಹಾಗೂ ಉಪಾಧ್ಯಕ್ಷರಾಗಿ ರವಿಚಂದ್ರ ಸಾಜ ಆಯ್ಕೆಯಾಗಿದ್ದಾರೆ.
ಒಟ್ಟು 11 ಸದಸ್ಯರನ್ನು ಹೊಂದಿರುವ ಪಂನಲ್ಲಿ ಬಿಜೆಪಿ ಬೆಂಬಲಿತ 8 ಹಾಗೂ ಕಾಂಗ್ರೆಸ್ ಬೆಂಬಲಿತ 3 ಮಂದಿ ಸದಸ್ಯರನ್ನು ಹೊಂದಿದೆ. ಸಾಮಾನ್ಯ ಮಹಿಳಾ ಮೀಸಲು ಅಧ್ಯಕ್ಷ ಸ್ಥಾನಕ್ಕೆ ಹಾಲಿ ಉಪಾಧ್ಯಕ್ಷೆ ಪರಮೇಶ್ವರಿ ಭಟ್ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ರವಿಚಂದ್ರ ಮಾತ್ರ ನಾಮಪತ್ರ ಸಲ್ಲಿಸಿದ್ದು ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದ ಪರಮೇಶ್ವರಿ ಭಟ್ ರವರಿಗೆ ಇಂದಿರಾ ಎಸ್.ರೈ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದ ರವಿಚಂದ್ರ ರವರಿಗೆ ಬಾಲಸುಬ್ರಹ್ಮಣ್ಯ ಕೋಟ್ಯಾನ್ ಸೂಚಕರಾಗಿದ್ದರು. ಸದಸ್ಯರಾದ ಗಣೇಶ್ ಗೌಡ, ಕೃಷ್ಣಪ್ಪ ನಾಯ್ಕ, ಚಂದ್ರಾವತಿ, ಶೋಭಾ, ವಸಂತಿ ಹಾಗೂ ವಿನಯ ಉಪಸ್ಥಿತರಿದ್ದರು.
ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಬೂಡಿಯಾರ್ ರಾಧಾಕೃಷ್ಣ ರೈ, ಗ್ರಾಮಾಂತರ ಮಂಡಲದ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಮಾಜಿ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ಅಪ್ಪಯ್ಯ ಮಣಿಯಾಣಿ, ನಗರ ಸಭಾ ಮಾಜಿ ಅಧ್ಯಕ್ಷ ಜೀವಂಧರ್ ಜೈನ್, ಬಜರಂಗದಳದ ಪ್ರಾಂತ ಸಂಯೋಜಕ ಮುರಳಿಕೃಷ್ಣ ಹಸಂತಡ್ಕ, ಕೋ ಆಪರೇಟಿವ್ ಟೌನ್ ಬ್ಯಾಂಕ್ ನಿರ್ದೇಶಕ ಕಿರಣ್ ಶೆಟ್ಟಿ ಕಬ್ಬಿನಹಿತ್ತಿಲು, ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಅಕ್ಷಯ್, ಬಲ್ನಾಡು ಉಳ್ಳಾಲ್ತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ನಾರಾಯಣ ಪೂಜಾರಿ, ಭರತ್ ಚನಿಲ, ಪ್ರಕಾಶ್ ಕೆಲ್ಲಾಡಿ, ಜಯಂತ ಬಾಯಾರ್ ಸಹಿತ ಹಲವು ಮಂದಿ ಆಗಮಿಸಿ ನೂತನ ಅಧ್ಯಕ್ಷ, ಉಪಾಧ್ಯಕ್ಷರನ್ನು ಅಭಿನಂದಿಸಿದರು.