ಜಿಲ್ಲಾ ತೆಂಗು ರೈತ ಉತ್ಪಾದಕರ ಸಂಸ್ಥೆಯ ಪ್ರಗತಿ ಪರಿಶೀಲನ ಸಭೆ

0

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆ ತೆಂಗು ರೈತ ಉತ್ಪಾದಕರ ಸಂಸ್ಥೆಯು ತೆಂಗಿನ ಮೌಲ್ಯವರ್ಧನೆಗಾಗಿ ಹಲವಾರು ಯೋಜನೆಗಳನ್ನು ಹಮ್ಮಿಕೊಂಡಿದ್ದು ಅವುಗಳಲ್ಲಿ ಒಂದಾದ ತೆಂಗಿನಕಾಯಿಯ ಗೆರಟೆಯ ಉತ್ಪನ್ನಗಳ ತಯಾರಿಕೆಗಾಗಿ ಅನೇಕ ತರಬೇತಿಗಳನ್ನು ನೀಡಲಾಗಿದ್ದು ತರಬೇತಿಯ ಪ್ರಗತಿ ಪರಿಶೀಲನ ಸಭೆಯು ಆ.16ರಂದು ನಡೆಯಿತು.ದಕ್ಷಿಣ ಕನ್ನಡ ಜಿಲ್ಲೆಯ ತೆಂಗು ರೈತ ಉತ್ಪಾದಕರ ಸಂಸ್ಥೆಯ ಕಾರ್ಪೊರೇಟ್ ಕಚೇರಿಯಲ್ಲಿ ನಬಾರ್ಡ್ ಮಂಗಳೂರು, ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ್ ಮತ್ತು ದಕ್ಷಿಣ ಕನ್ನಡ ಜಿಲ್ಲೆ ತೆಂಗು ರೈತ ಉತ್ಪಾದಕರ ಕಂಪನಿ ನಿಯಮಿತ ಇವರ ಉಪಸ್ಥಿತಿಯಲ್ಲಿ ನಡೆಸಲಾಯಿತು. ಈ ಸಭೆಯಲ್ಲಿ ನಬಾರ್ಡ್ ನ ಎಜಿಎಂ ಸಂಗೀತ ಕರ್ತ, ಭಾರತೀಯ ವಿಕಾಸ್ ಟ್ರಸ್ಟ್ ಮಣಿಪಾಲ್ ಸಂಸ್ಥೆಯ ಕಾರ್ಯಕ್ರಮ ವ್ಯವಸ್ಥಾಪಕ ಜೀವನ್, ದಕ್ಷಿಣ ಕನ್ನಡ ಜಿಲ್ಲಾ ತೆಂಗು ರೈತ ಉತ್ಪಾದಕರ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಕುಸುಮಾಧರ್ ಎಸ್ ಕೆ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚೇತನ್ ಎ, NRLM ಯೋಜನೆಯ ತಾಲೂಕು ಮೇಲ್ವಿಚಾರಕಿ ನಳಿನಿ ಮತ್ತು ಕೋಡಿಂಬಾಡಿ ಹಾಗೂ ವಿಟ್ಲ ಪಡನೂರ್ ಗ್ರಾಮದ ತೆಂಗಿನ ಗೆರಟೆ ಕಲಾಕೃತಿ ತಯಾರಿಕೆ ತರಬೇತಿಯಲ್ಲಿ ಭಾಗವಹಿಸಿದ ಸಂಜೀವಿನಿ ಒಕ್ಕೂಟದ ಸದಸ್ಯರು ಉಪಸ್ಥಿತರಿದ್ದರು.ತೆಂಗಿನ ಗೆರಟೆ ಕಲಾಕೃತಿ ತರಬೇತಿಯ ನಂತರ ಆದ ಬೆಳವಣಿಗೆ, ಮುಂದಿನ ಯೋಜನೆಗಳು, ಮಹಿಳೆಯರು ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸುವ ಬಗ್ಗೆ ಚರ್ಚಿಸಲಾಯಿತು.

LEAVE A REPLY

Please enter your comment!
Please enter your name here