ಬಡಗನ್ನೂರು ಗ್ರಾ.ಪಂ ಅಧ್ಯಕ್ಷರಾಗಿ ಪುಷ್ಪಲತಾ.ಎಂ, ಉಪಾಧ್ಯಕ್ಷರಾಗಿ ಸುಶೀಲ ಪಿ ಅಯ್ಕೆ

0

ಬಡಗನ್ನೂರುಃ ಬಡಗನ್ನೂರು ಗ್ರಾ.ಪಂ ಅಧ್ಯಕ್ಷ  ಉಪಾಧ್ಯಕ್ಷ ಸ್ಥಾನಕ್ಕೆ ಅಯ್ಕೆ ಪ್ರಕ್ರಿಯೆ ಅ.19 ರಂದು ಗ್ರಾ.ಪಂ ಸಭಾಂಗಣದಲ್ಲಿ ನಡೆಯಿತು.

ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಬೆಂಬಲಿತ ಇಬ್ಬರೂ ಅಭ್ಯರ್ಥಿ ನಾಮಪತ್ರ ಸಲ್ಲಿಸಿದ್ದರು. ಒಟ್ಟು 18 ಸದಸ್ಯ ಬಲ ಹೊಂದಿರುವ ಬಡಗನ್ನೂರು ಗ್ರಾ.ಪಂ ನಲ್ಲಿ ಬಿಜೆಪಿ 13, ಕಾಂಗ್ರೆಸ್ 4 , ಪಕ್ಷೇತರ 1 ಸ್ಥಾನ ಹೊಂದಿದೆ. ಈ ಪೈಕಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಪುಷ್ಪಲತಾ ಎಂ 12 ಮತ ಹಾಗೂ ಬಿಜೆಪಿ ಬಂಡಾಯ ಅಭ್ಯರ್ಥಿ ಶ್ರೀಮತಿ ಕೆ 6 ಮತ ಪಡೆದುಕೊಂಡರು. ಬಿಜೆಪಿ ಬೆಂಬಲಿತ ಅಭ್ಯರ್ಥಿ ಪುಷ್ಪಲತಾ 6 ಮತಗಳ ಅಂತರದಿಂದ ಜಯಗಳಿಸಿದರು.ಉಪಾಧ್ಯಕ್ಷ ಸ್ಥಾನಕ್ಕೆ ಸುಶೀಲ ಅವಿರೋಧ ಆಯ್ಕೆಯಾದರು.ಚುನಾವಣಾ ಅಧಿಕಾರಿಯಾಗಿ ಲೋಕೋಪಯೋಗಿ ಇಲಾಖಾ ಸಹಾಯಕ ಇಂಜಿನಿಯರ್ ಚಂದ್ರ ಕರ್ತವ್ಯ ನಿರ್ವಹಿಸಿದರು.ಪಿಡಿಒ ವಸೀಮ ಸಹಕರಿಸಿದರು.

ಬಿಜೆಪಿ ಅಭಿನಂನಾ ಕಾರ್ಯಕ್ರಮ 
ಗ್ರಾಮದ ಸರ್ವತೋಮುಖ ಅಭಿವೃದ್ಧಿಯಲ್ಲಿ ಪಣತೋಡಿ -ಚನಿಲ ತಿಮ್ಮಪ್ಪ ಶೆಟ್ಟಿ
ಗ್ರಾ.ಪಂ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಯಲ್ಲಿ ಭಾಗವಹಿಸಿ ಎಲ್ಲಾ ಸದಸ್ಯರಿಗೆ ಹಾಗೂ ನೂತನ ಅಧ್ಯಕ್ಷರಾಗಿ ಅಯ್ಕೆಗೊಂಡ ಪುಷ್ಪಲತಾ ಹಾಗೂ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆಗೊಂಡ ಸುಶೀಲ ಅವರಿಗೆ ಅಭಿನಂದನೆ ಸಲ್ಲಿಸಿ ಮಾತನಾಡಿ ಚನಿಲ ತಿಮ್ಮಪ್ಪ ಶೆಟ್ಟಿ ಮುಂದಿನ ಎರಡುವರೆ ವರ್ಷದಲ್ಲಿ ಅಧ್ಯಕ್ಷ ಉಪಾಧ್ಯಕ್ಷ ಅವಧಿಯಲ್ಲಿ  ಗ್ರಾಮದ ಸರ್ವತೋಮುಖ ಅಭಿವೃದ್ಧಿಯಲ್ಲಿ ತಮ್ಮ ಸಮಯ ಮತ್ತು ಸರ್ಕಾರದ ಸೌಲಭ್ಯಗಳನ್ನು ಅನುದಾನವನ್ನು ಅರ್ಹ ಫಲಾನುಭವಿಗಳಿಗೆ ನೀಡುವ ಮೂಲಕ ಮಾದರಿ ಪಂಚಾಯತ್ ಆಗಲಿ ಎಂದು ಶುಭ ಹಾರೈಸಿದರು.

ನೂತನ ಅಧ್ಯಕ್ಷರಾಗಿ ಆಯ್ಕೆಗೊಂಡ ಪುಷ್ಪಲತಾ ಮಾತನಾಡಿ ಅಧ್ಯಕ್ಷರಾಗಿ ಚುನಾಯಿಸಲು  ಪ್ರತ್ಯಕ್ಷ ಹಾಗೂ ಪರೋಕ್ಷ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು.

ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಗೊಂಡ ಸುಶೀಲ ಪಿ ಮಾತನಾಡಿ, ಮುಂದಿನ ಎರಡುವರೆ ವರ್ಷಗಳ ಅವಧಿಗೆ  ನನ್ನನು ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆ ಮಾಡಿದ್ದೀರಿ ಗ್ರಾಮದ ಅಭಿವೃದ್ಧಿಗೆ ಎಲ್ಲರೂ ಒಟ್ಟಾಗಿ ಕೆಲಸ ಮಾಡೋಣ ಎಂದು ಹೇಳಿದರು.

ಈ ಸಂದರ್ಭದಲ್ಲಿ ಪಕ್ಷದ ಪ್ರಮುಖರಾದ ಅಪ್ಪಯ್ಯ ಮಣಿಯಾಣಿ, ಜೀವಂಧರ  ಜೈನ್, ನಿತೀಶ್ ಶಾಂತಿವನ,, ಗ್ರಾ.ಪಂ ಮಾಜಿ ಉಪಾಧ್ಯಕ್ಷ ಸಂತೋಷ್ ಆಳ್ವ, ಸದಸ್ಯರುಗಳಾದ ರವಿಚಂದ್ರ ಸಾರೆಪ್ಪಾಡಿ, ವಸಂತ ಗೌಡ ಕನ್ನಯ, ಸವಿತಾ ನೆರೋಳ್ತಡ್ಕ, ದಮಯಂತಿ  ಕೆಮ್ಮನಡ್ಕ, ವೆಂಕಟೇಶ ಕನ್ನಡ್ಕ, ಪದ್ಮನಾಭ  ಸುಳ್ಯಪದವು, ಕುಮಾರ ಅಂಬಟೆಮೂಲೆ, ಹೇಮಾವತಿ ಮೊಡಿಕೆ ಹಾಗೂ ಪಕ್ಷದ ಕಾರ್ಯಕರ್ತರಾದ ಅನಂತ್ ಕುತ್ಯಾಳ, ಸುಬ್ರಾಯ ನಾಯಕ್ ಮೆಗಿನಮನೆ, ದಿನೇಶ್ ರೈ ಕುತ್ಯಾಳ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here