ಪುತ್ತೂರು: ಸಂಘದ ಗಣನೀಯ ಸಾಧನೆ ಹಾಗೂ ಸಾಲ ವಸೂಲಾತಿಯಲ್ಲಿ ಶೇ.99 ಸಾಧನೆ ಮಾಡಿದ ಹಿನ್ನಲೆಯಲ್ಲಿ ಕುಂಬ್ರ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘಕ್ಕೆ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ನಿಂದ ಪ್ರಶಸ್ತಿ ನೀಡಿ ಗೌರವಿಸಲಾಯಿತು.ಆ.19ರಂದು ಡಿಸಿಸಿ ಬ್ಯಾಂಕ್ನ ಉತ್ಕೃಷ್ಟ ಸಹಕಾರಿ ಭವನದಲ್ಲಿ ನಡೆದ ಸಂಘದ ಮಹಾಸಭೆಯಲ್ಲಿ ಬ್ಯಾಂಕ್ನ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ರವರು ಪ್ರಶಸ್ತಿ ಪ್ರದಾನ ಮಾಡಿದರು. ಕುಂಬ್ರ ಸಿಎ ಬ್ಯಾಂಕ್ ಅಧ್ಯಕ್ಷ ಪ್ರಕಾಶ್ಚಂದ್ರ ರೈ ಕೈಕಾರ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭವಾನಿ ಬಿ.ಆರ್ರವರು ಪ್ರಶಸ್ತಿ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಡಿಸಿಸಿ ಬ್ಯಾಂಕ್ ನಿರ್ದೇಶಕರುಗಳಾದ ಶಶಿಕುಮಾರ್ ರೈ ಬಾಲ್ಯೊಟ್ಟು, ಎಸ್.ಬಿ.ಜಯರಾಮ ರೈ, ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಪ್ರಸಾದ್ ಕೌಶಲ್ ಶೆಟ್ಟಿ ಬೆಳ್ಳಿಪ್ಪಾಡಿ,ಕುಂಬ್ರ ಸಿಎ ಬ್ಯಾಂಕ್ ನಿರ್ದೇಶಕರುಗಳಾದ ಸೂರ್ಯನಾರಾಯಣ ಭಟ್, ಸಂತೋಷ್ ಕುಮಾರ್ ರೈ, ಸುಕುಮಾರ ಮತ್ತಿತರರು ಉಪಸ್ಥಿತರಿದ್ದರು.