![](https://puttur.suddinews.com/wp-content/uploads/2024/06/Imperial_Manjunatheshwara_-GL-Acharya.gif)
ಪುತ್ತೂರು : ಪುತ್ತೂರು ತಾಲೂಕಿನಲ್ಲಿ ಹುತ್ತಕ್ಕೆ ಪೂಜೆ ಸಲ್ಲುವ ಏಕೈಕ ಕ್ಷೇತ್ರ ಕೊಳ್ತಿಗೆ ಗ್ರಾಮದ ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆ.21ರಂದು ನಾಗರ ಪಂಚಮಿ ನಡೆಯಿತು. ನಾಗರ ಪಂಚಮಿಯ ಅಂಗವಾಗಿ ದೇವಸ್ಥಾನದ ನಾಗನಕಟ್ಟೆಯಲ್ಲಿ ನಾಗದೇವರಿಗೆ ಹಾಲಿನ ಅಭಿಷೇಕ, ಸಿಯಾಳ ಅಭಿಷೇಕ ನಾಗತಂಬಿಲ ನಡೆಯಿತು. ವಲ್ಮಿಕ ರೂಪಿ ಶ್ರೀ ಸುಬ್ರಹ್ಮಣ್ಯ ದೇವರಿಗೆ ಮಹಾಪೂಜೆ ನಡೆದ ಬಳಿಕ ಮಧ್ಯಾಹ್ನ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು.