ಕಾಣಿಯೂರು: ತೆಲಂಗಾಣದ ಮಂಚೇರಿಯಲ್ ಜಿಲ್ಲೆಯ ಬೆಳ್ಳಂಪಲ್ಲಿ ತಾಲೂಕಿನ ವಿಧಾನಸಭಾ ಕ್ಷೇತ್ರದ ಕನ್ನೆಪಲ್ಲಿ ಮಂಡಲದ ಪಕ್ಷ ಸಂಘಟನೆ ಹಾಗೂ ಚುನಾವಣಾ ಸಿದ್ಧತೆಯ ತಯಾರಿಗಳ ಕುರಿತು ಪ್ರಮುಖರ ಸಭೆಯಲ್ಲಿ ಭಾಗಿಯಾಗಿರುವ ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಅವರು ಮಹಿಳಾ ಕೃಷಿಕರೊಂದಿಗೆ ಗದ್ದೆಯಲ್ಲಿ ನೇಜಿ ನಾಟಿ ಮಾಡುವ ಮೂಲಕ ಗಮನ ಸೆಳೆದರು. ಈ ಸಂದರ್ಭದಲ್ಲಿ ಪಕ್ಷದ ಪ್ರಮುಖರು, ಕಾರ್ಯಕರ್ತರು, ಸ್ಥಳೀಯರು ಉಪಸ್ಥಿತರಿದ್ದರು.