ಪುತ್ತೂರು: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವಠಾರ ಸಮಿತಿಯಿಂದ ನಡೆಯುವ 57ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವಕ್ಕೆ ಆ.23ರಂದು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರು ಗದ್ದೆಯಲ್ಲಿ ಚಪ್ಪರ ಮುಹೂರ್ತ ನಡೆಯಿತು.
ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ವೇ ಮೂ ವಿ.ಎಸ್ ಭಟ್ ಅವರು ಚಪ್ಪರ ಮುಹೂರ್ತ ನೆರವೇರಿಸಿದರು. ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷ ಸುಜೀಂದ್ರ ಪ್ರಭು, ಕಾರ್ಯಾಧ್ಯಕ್ಷ ರಾಧಾಕೃಷ್ಣ ನಂದಿಲ, ಪ್ರಧಾನ ಕಾರ್ಯದರ್ಶಿ ಅಶೋಕ್ ಕುಂಬ್ಳೆ, ಖಜಾಂಜಿ ಶ್ರೀನಿವಾಸ್ ಮೂಲ್ಯ, ಜತೆ ಕಾರ್ಯದರ್ಶಿ ನೀಲಂತ್, ಉಪಾಧ್ಯಕ್ಷ ರವೀಂದ್ರ ಶೆಟ್ಟಿ ನುಳಿಯಾಲು, ವಿಶ್ವನಾಥ ಗೌಡ, ಸುಧೀರ್ ಶೆಟ್ಟಿ, ಗೌರವ ಸಲಹೆಗಾರ ಚಂದ್ರಶೇಖರ್ ರಾವ್ ಬಪ್ಪಳಿಗೆ, ಮಲ್ಲೇಶ್ ಆಚಾರ್ಯ, ರಾಜೇಶ್ ಬನ್ನೂರು, ಉದಯ ಹೆಚ್, ಸಂಸ್ಕೃತಿಕ ಕಾರ್ಯಕ್ರಮ ಸಮಿತಿ ಸಂಚಾಲಕ ಅಜಿತ್ ರೈ ಹೊಸಮನೆ, ಸ್ವಾಗತ ಸಮಿತಿ ಸಂಚಾಲಕ ಚಂದ್ರಶೇಖರ್ ಎಸ್, ವಿಶ್ವಹಿಂದು ಪರಿಷತ್ ಜಿಲ್ಲಾಧ್ಯಕ್ಷ ಡಾ.ಕೃಷ್ಣಪ್ರಸನ್ನ, ಆನಂದ ನೆಕ್ಕರೆ ಮತ್ತಿತರರು ಉಪಸ್ಥಿತರಿದ್ದರು.
ವಿಕ್ರಮ್ ಲ್ಯಾಂಡರ್ ಸುರಕ್ಷಿತವಾಗಿ ಇಳಿಯುವಂತೆ ಪ್ರಾರ್ಥನೆ
ಚಂದ್ರಯಾನ ಲ್ಯಾಂಡರ್ ಚಂದ್ರನ ದಕ್ಷಿಣ ಧ್ರುವದ ಮೇಲೆ ಗಮನಾರ್ಹವಾದ ಲ್ಯಾಂಡಿಂಗ್ ಮಾಡುವ ಮೂಲಕ ಇತಿಹಾಸವನ್ನು ನಿರ್ಮಿಸಲಿದೆ. ವಿಕ್ರಮ್ ಲ್ಯಾಂಡರ್ ಯಶಸ್ವಿಯಾಗಿ ಚಂದ್ರನ ಮೇಲೆ ಇಳಿಯುವಂತೆ ಗಣಪತಿ ದೇವರಲ್ಲಿ ಪ್ರಾರ್ಥನೆ ಮಾಡುತ್ತಿದ್ದೇವೆ ಎಂದು ಸಮಿತಿ ಗೌರವ ಸಲಹೆಗಾರ ರಾಜೇಶ್ ಬನ್ನೂರು ತಿಳಿಸಿದರು.