ಉಪ್ಪಿನಂಗಡಿ- ಸುಬ್ರಮಣ್ಯ ರಾಜ್ಯ ಹೆದ್ದಾರಿ ಅವೈಜ್ಞಾನಿಕ ಕಾಮಗಾರಿ ಪರಿಶೀಲನೆಗೆ ಆಗ್ರಹಿಸಿ ಕೆಮ್ಮಾರ ನಾಗರಿಕ ಹಿತರಕ್ಷಣಾ ವೇದಿಕೆ ಮನವಿ

0

ಉಪ್ಪಿನಂಗಡಿ: ಆ 23. ಉಪ್ಪಿನಂಗಡಿ-ಸುಬ್ರಮಣ್ಯ ರಾಜ್ಯ ಹೆದ್ದಾರಿಯ ಹಳೇಗೇಟುವಿನಿಂದ ಕೆಮ್ಮಾರ ಕೊಯಿಲದ ವರೆಗೆ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ಅವೈಜ್ಞಾನಿಕ ಮತ್ತು ಅಸಮರ್ಪಕ ಕಾಮಗಾರಿಯಿಂದ ಮಳೆಗಾಲದಲ್ಲಿ ರಸ್ತೆ ಮಧ್ಯೆ ನೀರು ಹರಿದು ನಿಂತಿರುತ್ತದೆ. ಇದರಿಂದ ವಾಹನಗಳು ಸಂಚರಿಸುವಾಗ ಬಸ್ಸಿಗಾಗಿ ಕಾಯುವ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಕೆಸರು ನೀರು ಎರಚಿ ತೊಂದರೆಯಾಗುತ್ತಿದೆ. ಮಾತ್ರವಲ್ಲದೇ ಶಾಲಾ ವಠಾರ, ಸ್ಥಳ ಗುರುತಿಸುವ, ಕಿಲೋಮೀಟರ್, ತಿರುವು, ಅಪಘಾತ ವಲಯ ಸೇರಿದಂತೆ ಯಾವುದೇ ಸೂಚನಾ ಫಲಕವು ಇಲ್ಲದಿರುವುದನ್ನು ಮತ್ತು ಸರಿಯಾದ ಚರಂಡಿ ವ್ಯವಸ್ಥೆ ಕಲ್ಪಿಸುವ ಸಲುವಾಗಿ ಶಾಸಕ ಅಶೋಕ್ ಕುಮಾರ್ ರೈ ಮತ್ತು ಪುತ್ತೂರು ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಲೋಕೋಪಯೋಗಿ ಇಲಾಖೆಗೆ ʼಕೆಮ್ಮಾರ ನಾಗರಿಕ ಹಿತರಕ್ಷಣಾ ವೇದಿಕೆʼ ವತಿಯಿಂದ ಮನವಿಯನ್ನು ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಕೆಮ್ಮಾರ ನಾಗರಿಕ ಹಿತರಕ್ಷಣಾ ವೇದಿಕೆ ಅಧ್ಯಕ್ಷರಾದ ಅಝೀಝ್ ಬಿ.ಕೆ, ವಾಮನ ಬರಮೇಲು, ಪದ್ಮನಾಭ ಶೆಟ್ಟಿ, ಮೋಹನದಾಸ ಶೆಟ್ಟಿ ಬಡಿಲ, ಅಬ್ದುಲ್ ಗಫ್ಫಾರ್ ಕೆಮ್ಮಾರ, ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here