ಈಶ್ವರಮಂಗಲ:ಹನುಮಗಿರಿ ಶ್ರೀ ಗಜಾನನ ವಿದ್ಯಾಸಂಸ್ಥೆಯಿಂದ ಚಂದ್ರಯಾನ-3 ರ ಯಶಸ್ವಿ ಉಡಾವಣೆಯ ಸಂಭ್ರಮಾಚರಣೆಯನ್ನು ಮಾಡಲಾಯಿತು. ಸಂಸ್ಥೆಯ ಸಂಚಾಲಕ ಶಿವರಾಮ ಪಿ ಚಂದ್ರಯಾನ – 3 ರ ಯಶಸ್ವಿಯಿಂದ ಇಡೀ ವಿಶ್ವವೇ ಭಾರತದತ್ತ ಮುಖ ಮಾಡಿದೆ. ಭಾರತ ಈಗ ವಿಶ್ವಗುರು ಎನಿಸಿಕೊಳ್ಳುವುದರಲ್ಲಿ ಎರಡು ಮಾತಿಲ್ಲ ಎಂದು ಹೇಳಿ ವಿಜ್ಞಾನಿಗಳ ಸತತ ಪ್ರಯತ್ನವನ್ನು ಕೊಂಡಾಡಿದರು.
ಸಂಸ್ಥೆಯ ಪ್ರಾಂಶುಪಾಲ. ಕೆ ಶಾಮಣ್ಣ ಇಸ್ರೋದ ವಿಜ್ಞಾನಿಗಳ ತಂಡದಲ್ಲಿ ನಮ್ಮೂರಿನ ಸಾಧಕ ನಮ್ಮ ಯುವ ಪೀಳಿಗೆಗೆ ಪ್ರೇರಕರಾಗಿದ್ದಾರೆ ಹಾಗೆಯೇ ಮಕ್ಕಳಿಗೆ ವೈಜ್ಞಾನಿಕ ಸಂಶೋಧನೆಯಲ್ಲಿ ತೊಡಗಿಕೊಳ್ಳಲು ಪ್ರೇರೇಪಿಸಿದರು.
ಸಂಸ್ಥೆಯ ಮುಖ್ಯೋಪಾಧ್ಯಾಯ. ಅಮರನಾಥ ಬಿ ಪಿ “ಯಶಸ್ವಿ ಉಡಾವಣೆಯಲ್ಲಿ ಕನ್ನಡಿಗರ ಪಾತ್ರ ಹಾಗೂ ನಮ್ಮ ವಿದ್ಯಾರ್ಥಿಗಳು ಸಹ ಸಂಶೋದನೆಯಲ್ಲಿ ತೊಡಗಿಸಿಕೊಳ್ಳುವಂತಾಗಬೇಕು ಎಂದು ಮಕ್ಕಳನ್ನು ಹುರಿದುಂಬಿಸಿದರು.
ಸಂಸ್ಥೆಯ ಸಹಶಿಕ್ಷಕಿ ಸೌಮ್ಯ ಎಂ ಇಸ್ರೋ ವಿಜ್ಞಾನಿಗಳ ಕಠಿಣ ಪರಿಶ್ರಮದ ಕುರಿತು ಮಾತನಾಡಿದರು. ಸಂಸ್ಥೆಯ ವಿದ್ಯಾರ್ಥಿನಿಯರು ದೇಶಭಕ್ತಿಯೊಂದಿಗೆ ವಿಜ್ಞಾನಿಗಳ ಸಾಧನೆಯನ್ನು ಕೊಂಡಾಡಿದರು. ಸಹಶಿಕ್ಷಕಿ ಶ್ರೀಮತಿ ಸುಪ್ರೀತಾ ಎಂ ಕಾರ್ಯಕ್ರಮ ನಿರೂಪಿಸಿದರು.