ಪುತ್ತೂರು: ಇತ್ತೀಚೆಗೆ ಇಲ್ಲಿನ ಅಕ್ಷಯ ಎಜುಕೇಶನಲ್ ಅಂಡ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ಕಾಲೇಜಿನ ಶಿಕ್ಷಕ ಹಾಗೂ ಹೆತ್ತವರ ಸಂಘದ ವತಿಯಿಂದ ನೂತನವಾಗಿ ದಾಖಲಾದ ವಿದ್ಯಾರ್ಥಿಗಳಿಗೆ ಹಾಗೂ ಅವರ ಪೋಷಕರಿಗೆ ಮಾಹಿತಿ ಕಾರ್ಯಾಗಾರವನ್ನು ನಡೆಸಲಾಯಿತು.
ಕಾರ್ಯಕ್ರಮವನ್ನು ಅಕ್ಷಯ ಕಾಲೇಜಿನ ಆಡಳಿತ ನಿರ್ದೇಶಕಿ ಕಲಾವತಿ ನಡುಬೈಲು ದೀಪ ಪ್ರಜ್ವಲಿಸಿ, ನಮ್ಮ ಕಾಲೇಜನ್ನು ಆಯ್ಕೆಮಾಡಿದ ಎಲ್ಲಾ ವಿದ್ಯಾರ್ಥಿಗಳಿಗೆ ಶುಭಾಶಯ ಕೋರಿ, ವಿದ್ಯಾರ್ಥಿಗಳನ್ನು ಬರಮಾಡಿಕೊಂಡರು.ಕಾಲೇಜಿನ ಪ್ರಾಂಶುಪಾಲ ಸಂಪತ್ ಪಕ್ಕಳ ಕಾರ್ಯಕ್ರಮದ ಪ್ರಾಸ್ತಾವಿಕ ನುಡಿಯನ್ನಾಡುತ್ತಾ ವಿದ್ಯಾರ್ಥಿಗಳಿಗೆ ಕಾಲೇಜಿನ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದರು.
ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಶ್ರೀ ಎಂ.ಜಿ ಹೆಗ್ಡೆ, ಸ್ಥಾಪಕಾಧ್ಯಕ್ಷರು, ಮಿಫ್ಟ್ ಕಾಲೇಜು, ಮಂಗಳೂರು ಮಾತನಾಡಿ ವಿದ್ಯಾರ್ಥಿಗಳು ಶೈಕ್ಷಣಿಕ ಸಾಲಿನಲ್ಲಿ ಯಾವುದೇ ಸಾಧನೆಯನ್ನು ಮಾಡಲು ಏಕಾಗ್ರತೆ ಮುಖ್ಯವಾಗಿದ್ದು, ಛಲದಿಂದ ವಿದ್ಯಾಭ್ಯಾಸ ಮಾಡಿ ಕಾಲೇಜು ಹಾಗೂ ಪೋಷಕರಿಗೆ ಕೀರ್ತಿತಂದುಕೊಡುವ ಜವಾಬ್ದಾರಿ ಪ್ರತಿಯೊಬ್ಬ ವಿದ್ಯಾರ್ಥಿಯಾಗಿರುತ್ತದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಆಡಳಿತಾಧಿಕಾರಿಯಾದ ಅರ್ಪಿತ್ ಟಿ.ಎ. ಕಾಲೇಜಿನ ನಿಯಮಾವಳಿಗಳ ಬಗ್ಗೆ ವಿಸ್ತಾರವಾಗಿ ವಿವರಿಸಿದರು.
ಕಾರ್ಯಕ್ರಮವನ್ನು ಉಪನ್ಯಾಸಕರಾದ ರಶ್ಮಿ ಕೆ ಸ್ವಾಗತಿಸಿ, ರಕ್ಷಣ್ ಟಿ ಆರ್ ವಂದಿಸಿದರು ಹಾಗೂ ಉಪನ್ಯಾಸಕಿ ಆಶಿಕಾ ಫರ್ಝಾನ ಕಾರ್ಯಕ್ರಮ ನಿರೂಪಿಸಿದರು.