ನಿಡ್ಪಳ್ಳಿ ದೇವಸ್ಥಾನದಲ್ಲಿ 5 ನೇ ವರ್ಷದ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮೀ ವ್ರತ ಪೂಜೆ

0

ನಿಡ್ಪಳ್ಳಿ; ಶ್ರೀ ಶಾಂತದುರ್ಗಾ ದೇವಸ್ಥಾನ ಶ್ರೀ ಕ್ಷೇತ್ರ ನಿಡ್ಪಳ್ಳಿ, ಶ್ರೀ ವರಮಹಾಲಕ್ಷ್ಮೀ ವ್ರತ ಪೂಜಾ ಸಮಿತಿ ನಿಡ್ಪಳ್ಳಿ ಇವುಗಳ ಜಂಟಿ ಆಶ್ರಯದಲ್ಲಿ 5 ನೇ ವರ್ಷದ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮೀ ವ್ರತ ಪೂಜೆ ಅ.25 ರಂದು ರಾತ್ರಿ ವೇದಮೂರ್ತಿ ದಿನೇಶ ಮರಡಿತ್ತಾಯ ಗುಮ್ಮಟೆಗದ್ದೆ ಇವರ ನೇತೃತ್ವದಲ್ಲಿ ದೇವಸ್ಥಾನದಲ್ಲಿ ನಡೆಯಿತು.

ಸಂಜೆ ಪೂಜೆ ಪ್ರಾರಂಭವಾಗಿ ರಾತ್ರಿ ಮಹಾಮಂಗಳಾರತಿ, ಪ್ರಸಾದ ವಿತರಣೆ ನಂತರ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು.ಪೂಜಾ ಸಮಿತಿ ಸದಸ್ಯರು, ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರು ಹಾಗೂ ಊರ ಪರವೂರ ಭಕ್ತಾದಿಗಳು ಪಾಲ್ಗೊಂಡರು.

LEAVE A REPLY

Please enter your comment!
Please enter your name here