ನಾಸಿರ್ ಆತ್ಮಹತ್ಯೆಗೆ ಕಾರಣರಾದವರ ವಿರುದ್ದ ದೂರು ದಾಖಲಿಸಿದ ತಾಯಿ

0

ಪುತ್ತೂರು: ವಿಡಿಯೋ ಚಿತ್ರೀಕರಣ ಮಾಡಿ ವಿಷ ಸೇವಿಸಿದ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅಬ್ದುಲ್‌ ನಾಸಿರ್‌ ನ ತಾಯಿ ನೆಬಿಸಾ ಎಂಬವರು ಬೆಳ್ಳಾರೆ ಪೊಲೀಸ್‌ ಠಾಣೆಯಲ್ಲಿ ಆ.22ರಂದು ದೂರು ದಾಖಲಿಸಿ ತನ್ನ ಮಗ ಆತ್ಮಹತ್ಯೆ ಪ್ರಯತ್ನಕ್ಕೆ ಸುಮಯ್ಯ, ಅದ್ರಾಮ, ಮೊಯ್ದು, ತಾಜು, ಅಬ್ದುಲ್ಲ, ಸಮೀರ್, ನೌಫಲ್,ಅತ್ತಾವುಲ್ಲಾ ಎಂಬವರು ಕಾರಣ ಎಂದು ಆರೋಪಿಸಿದ್ದರು. ನೆಬಿಸಾ ಅವರು ನೀಡಿದ ದೂರಿನ ಮೇರೆಗೆ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಕಲಂ 306R/W 34ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.
ವಿಡಿಯೋ ಚಿತ್ರೀಕರಣ ಮಾಡಿ ವಿಷ ಸೇವಿಸಿ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅಬ್ದುಲ್‌ ನಾಸಿರ್‌ ಆ.27ರಂದು ಚಿಕಿತ್ಸೆ ಫಲಕಾರಿಯಾಗದೆ ಮೃತ ಪಟ್ಟಿದ್ದರು.

LEAVE A REPLY

Please enter your comment!
Please enter your name here