ಸೆ.1ರಂದು ಕೆರೆ ಲೋಕಾರ್ಪಣೆಗೆ ನಿರ್ಧಾರ
ಸವಣೂರು : ಸವಣೂರು ಗ್ರಾಮ ಪಂಚಾಯತ್‌ನ ಕುಮಾರಧಾರ ಸಭಾಂಗಣದಲ್ಲಿ ಕೊಂಬ ಕೆರೆ ಅಭಿವೃದ್ದಿ ಸಮಿತಿ ಸಭೆಯು ಗ್ರಾ.ಪಂ.ನ ಕುಮಾರಧಾರ ಸಭಾಂಗಣದಲ್ಲಿ ಆ.28ರಂದು ನಡೆಯಿತು.
ಸಂಪೂರ್ಣವಾಗಿ ಹೂಳು ತುಂಬಿದ್ದ ಕೊಂಬಕೆರೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಹಾಗೂ ಸವಣೂರು ಗ್ರಾ.ಪಂ.ವತಿಯಿಂದ ಅಭಿವೃದ್ಧಿ ಪಡಿಸಲಾಗಿದ್ದು, ಇದರ ಲೋಕಾರ್ಪಣೆ ಮಾಡುವ ನಿಟ್ಟಿನಲ್ಲಿ ಸಭೆ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಸವಣೂರು ಗ್ರಾ.ಪಂ.ಅಧ್ಯಕ್ಷೆ ಸುಂದರಿ ಬಿ.ಎಸ್ ಅವರು ವಹಿಸಿದ್ದರು. ವೇದಿಕೆಯಲ್ಲಿ ಗ್ರಾ.ಪಂ.ಉಪಾಧ್ಯಕ್ಷೆ ಜಯಶ್ರೀ, ಕೆರೆ ಅಭಿವೃದ್ಧಿ ಸಮಿತಿ ಅಧ್ಯಕ್ಷ ಗಿರಿಶಂಕರ ಸುಲಾಯ, ಉಪಾಧ್ಯಕ್ಷ ನಾರಾಯಣ ಗೌಡ ಪೂವ ಉಪಸ್ಥಿತರಿದ್ದರು.
ಗ್ರಾಮಾಭಿವೃದ್ದಿ ಯೋಜನೆಯ ಕೃಷಿ ಅಧಿಕಾರಿ ಸೋಮೇಶ್ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಗ್ರಾ.ಪಂ.ಸದಸ್ಯರಾದ ರಾಜೀವಿ ಶೆಟ್ಟಿ ಕೆಡೆಂಜಿ, ಅಬ್ದುಲ್ ರಝಾಕ್,ಬಾಬು ಎನ್, ಕೆರೆ ಅಭಿವೃದ್ಧಿ ಸಮಿತಿ ಸದಸ್ಯರಾದ ಮೋನಪ್ಪ ನಾಯ್ಕ ಕೊಂಬಕೆರೆ, ಕೊರಗಪ್ಪ ಗೌಡ ,ಜನಜಾಗೃತಿ ವೇದಿಕೆಯ ಕಡಬ ತಾಲೂಕು ಘಟಕದ ಅಧ್ಯಕ್ಷ ಮಹೇಶ್ ಕೆ.ಸವಣೂರು, ಗ್ರಾಮಾಭಿವೃದ್ದಿ ಯೋಜನೆಯ ಮೇಲ್ವಿಚಾರಕಿ ಹರ್ಷ ಕುಮಾರಿ, ಸೇವಾ ಪ್ರತಿನಿಧಿಗಳಾದ ಮೀನಾಕ್ಷಿ ಸವಣೂರು ,ಕಾವ್ಯಾ ಚಾರ್ವಾಕ ಉಪಸ್ಥಿತರಿದ್ದರು.
ಗ್ರಾ.ಪಂ.ಲೆಕ್ಕ ಸಹಾಯಕ ಎ.ಮನ್ಮಥ ಸ್ವಾಗತಿಸಿ ,ಪ್ರಮೋದ್ ಕುಮಾರ್ ಬಿ.ವಂದಿಸಿದರು.