ಬಿಜೆಪಿ ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣಗುರು ಜಯಂತಿ

0

ಪುತ್ತೂರು: ಪುತ್ತೂರು ಬಿಜೆಪಿ ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 169 ನೇ ಜಯಂತಿಯನ್ನು ಗುರುಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಆಚರಿಸಲಾಯಿತು ಹಾಗೂ ಇದೆ ಸಂದರ್ಭದಲ್ಲಿ ರಕ್ಷಾಬಂಧನ ಆಚರಿಸಲಾಯಿತು.


ಬಿಜೆಪಿ ಪುತ್ತೂರು ಗ್ರಾಮಾಂತರ ಮಂಡಲದ ಪ್ರಧಾನ ಕಾರ್ಯದರ್ಶಿ ನಿತೀಶ್ ಕುಮಾರ್ ಶಾಂತಿವನ ಅವರು ಬ್ರಹ್ಮಶ್ರೀ ನಾರಾಯಣ ಗುರುಗಳ ಜನನ ಮತ್ತು ಅವರ ಜೀವನ ಸಂದೇಶವನ್ನು ತಿಳಿಸಿದರು. ಪುತ್ತೂರು ಬಿಜೆಪಿ ನಗರ ಮಂಡಲದ ಅಧ್ಯಕ್ಷ ಪಿ ಜಿ ಜಗನ್ನಿವಾಸ್ ರಾವ್‌ರವರು ರಕ್ಷಾ ಬಂಧನ ಹಬ್ಬದ ಪ್ರಾಸ್ತವಿಕ ಮಾತುಗಳನ್ನಾಡಿದರು. ಈ ಸಂದರ್ಭದಲ್ಲಿ ಬಿಜೆಪಿ ಪುತ್ತೂರು ಗ್ರಾಮಾಂತರ ಮಂಡಲದ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಬೂಡಿಯಾರು ರಾದಕೃಷ್ಣ ರೈ, ಬಿಜೆಪಿ ಜಿಲ್ಲಾ ಹಿಂದುಳಿದ ಮೋರ್ಚಾ ಅಧಕ್ಷ ಆರ್.ಸಿ. ನಾರಾಯಣ, ಬಿಜೆಪಿ ಪುತ್ತೂರು ಗ್ರಾಮಾಂತರ ಹಾಗೂ ನಗರ ಮಂಡಲದ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಮುಂಗ್ಲಿಮನೆ, ಯುವರಾಜ್ ಕೆ ಪೆರಿಯಾತ್ತೊಡಿ, ಜಯಶ್ರೀ ಎಸ್ ಶೆಟ್ಟಿ, ಬಿಜೆಪಿ ಪುತ್ತೂರು ಗ್ರಾಮಾಂತರ ಮಂಡಲದ ಉಪಾಧ್ಯಕ್ಷ ಹರಿಪ್ರಸಾದ್ ಯಾದವ್, ಅರುಣ್ ವಿಟ್ಲ, ಬಿಜೆಪಿ ಜಿಲ್ಲಾ ಎಸ್.ಟಿ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಹರೀಶ್ ಬಿಜತ್ರೆ, ಬಿಜೆಪಿ ಗ್ರಾಮಾಂತರ ಮಂಡಲದ ಒಬಿಸಿ ಮೋರ್ಚಾ ಅಧ್ಯಕ್ಷ ಸುನೀಲ್ ಕುಮಾರ್ ದಡ್ಡು, ಬಿಜೆಪಿ ಪುತ್ತೂರು ಗ್ರಾಮಾಂತರ ಹಾಗೂ ನಗರ ಮಂಡಲದ ಪದಾಧಿಕಾರಿಗಳು ಕಾರ್ಯಕರ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here