ಕಾಣಿಯೂರು ಗ್ರಾ.ಪಂ.ನಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರ

0

ಕಾಣಿಯೂರು: ಕಾಣಿಯೂರು ಗ್ರಾಮ ಪಂಚಾಯತ್ ಮತ್ತು ಕಂಪಾನಿಯೋ ಪುತ್ತೂರು ಇದರ ಆಶ್ರಯದಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರವು ಕಾಣಿಯೂರು ಗ್ರಾ.ಪಂ.ನ ಕಣ್ವರ್ಷಿ ಸಭಾಭವನದಲ್ಲಿ ಸೆ.1ರಂದು ನಡೆಯಿತು. ಬ್ಯಾಂಕ್ ಆಫ್ ಬರೋಡ ಕಾಣಿಯೂರು ಶಾಖಾ ವ್ಯವಸ್ಥಾಪಕರಾದ ಅತಿಥ್ ರೈ ಶಿಬಿರವನ್ನು ಉದ್ಘಾಟಿಸಿ ಶುಭಹಾರೈಸಿರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಣಿಯೂರು ಗ್ರಾ.ಪಂ.ಅಧ್ಯಕ್ಷರಾದ ವಿಶ್ವನಾಥ ಕೊಪ್ಪ ವಹಿಸಿದ್ದರು. ಗ್ರಾ.ಪಂ.ಉಪಾಧ್ಯಕ್ಷೆ ಗಂಗಮ್ಮ ಗುಜ್ಜರ್ಮೆ, ಗ್ರಾ.ಪಂ.ಮಾಜಿ ಅಧ್ಯಕ್ಷೆ ಲಲಿತಾ ದರ್ಖಾಸು, ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಅಶೋಕ್ ಗೌಡ, ಕಾಣಿಯೂರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಸಾಜಿದಾ ಅತಿಥಿಗಳಾಗಿ ಭಾಗವಹಿಸಿದ್ದರು. ಗ್ರಾ.ಪಂ.ಮಾಜಿ ಉಪಾಧ್ಯಕ್ಷ ಗಣೇಶ್ ಉದನಡ್ಕ ಸ್ವಾಗತಿಸಿ, ಪಿಡಿಓ ದೇವರಾಜ್ ವಂದಿಸಿದರು. ಪುತ್ತೂರು ನೆಮ್ಮದಿ ವೆಲ್‌ನೆಸ್ ಸೆಂಟರ್‌ನ ಪ್ರಭಾಕರ ಸಲ್ಯಾನ್ ಕಾರ್ಯಕ್ರಮ ನಿರೂಪಿಸಿದರು.

ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರವು ಸೆ.14ರವರೆಗೆ ಕಾಣಿಯೂರು ಗ್ರಾ.ಪಂ.ಸಭಾಂಗಣದಲ್ಲಿ ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here