ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯಲ್ಲಿ ಸಂಸ್ಕೃತೋತ್ಸವ ಕಾರ್ಯಕ್ರಮ

0

ಸಂಸ್ಕೃತ ಅತ್ಯಂತ ಶ್ರೇಷ್ಠ ಹಾಗೂ ಪ್ರಸ್ತುತ ಭಾಷೆ : ಡಾ.ಗಣೇಶಕೃಷ್ಣ ಭಟ್ಟ


ಪುತ್ತೂರು: ಸಂಸ್ಕೃತವು ಅತ್ಯಂತ ಶ್ರೇಷ್ಠವಾದ ಭಾಷೆ. ಮಾತ್ರವಲ್ಲದೆ ಅಂದಿಗೂ ಇಂದಿಗೂ ಎಂದಿಗೂ ಪ್ರಸ್ತುತವಾದ ಭಾಷೆ. ಸಂಸ್ಕೃತದ ಅಧ್ಯಯನದಿಂದ ಅನೇಕ ಪ್ರಯೋಜನಗಳನ್ನು ನಾವು ಪಡೆಯಬಹುದು. ಬಹುಜನರು ನಂಬುವ ಜ್ಯೋತಿಷ್ಯ ಶಾಸ್ತ್ರತ ಸಂಸ್ಕೃತದ ಒಂದು ಅಂಗವೇ ಆಗಿದೆ ಎಂದು ಗುರುವಾಯೂರಿನ ಕೇಂದ್ರೀಯ ಸಂಸ್ಕೃತ ವಿಶ್ವವಿದ್ಯಾಲಯದ ಜ್ಯೋತಿಷಿ ಶಾಸ್ತ್ರದ ಸಹಾಯಕ ಪ್ರಾಧ್ಯಪಕ ಡಾ. ಗಣೇಶಕೃಷ್ಣ ಭಟ್ಟ ಹೇಳಿದರು.


ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ಸಿ.ಬಿ.ಎಸ್.ಇ ವಿದ್ಯಾಲಯದಲ್ಲಿ ಮಂಗಳವಾರ ಆಯೋಜಿಸಲಾದ ಸಂಸ್ಕೃತೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶಾಲಾ ಪ್ರಾಂಶುಪಾಲೆ ಮಾಲತಿ.ಡಿ, ಉಪಪ್ರಾಂಶುಪಾಲೆ ಸುಜನಿ ಬೋರ್ಕರ್, ಸಂಸ್ಕೃತ ಶಿಕ್ಷಕಿ ಸೌಂದರ್ಯಲಕ್ಷ್ಮೀ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ವಿದ್ಯಾರ್ಥಿ ಅದ್ವಿಕ್ ಕಲ್ಲೂರಾಯ ಸ್ವಾಗತಿಸಿ, ವಿದ್ಯಾರ್ಥಿನಿ ಭಾರ್ಗವಿ ಬೋರ್ಕರ್ ವಂದಿಸಿದರು . ವಿದ್ಯಾರ್ಥಿನಿ ಅರುಂಧತಿ ಎಲ್ ಆಚಾರ್ಯ ಕಾರ್ಯಕ್ರಮವನ್ನು ನಿರೂಪಿಸಿದರು. ಈ ಸಂದರ್ಭದಲ್ಲಿ ವಿವಿಧ ಬಗೆಯ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು.

LEAVE A REPLY

Please enter your comment!
Please enter your name here