





ರಾಮಕುಂಜ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪುತ್ತೂರು ಇದರ ಆಶ್ರಯದಲ್ಲಿ ಕುಂತೂರುಪದವು ಸೈಂಟ್ ಜಾರ್ಜ್ ಪ್ರೌಢಶಾಲೆಯಲ್ಲಿ ನಡೆದ ಕಡಬ ವಲಯ ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ವಾಲಿಬಾಲ್ ಪಂದ್ಯಾಟದಲ್ಲಿ ರಾಮಕುಂಜ ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯ ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದೆ. ಬಾಲಕಿಯರ ತಂಡವು ದ್ವಿತೀಯ ಸ್ಥಾನ ಪಡೆದುಕೊಂಡಿದೆ.


ವಿದ್ಯಾರ್ಥಿಗಳಿಗೆ ಶಾಲಾ ಹಿರಿಯ ವಿದ್ಯಾರ್ಥಿಗಳಾದ ಅಝೀಝ್ ಮತ್ತು ಶಬೀರ್ ಬಿ.ಕೆ.ತರಬೇತಿ ನೀಡಿದ್ದರು. ಶಾಲಾ ದೈಹಿಕ ಶಿಕ್ಷಣ ಶಿಕ್ಷಕಿ ಪ್ರಫುಲ್ಲ ರೈಯವರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದ್ದರು. ಶಾಲಾ ಮುಖ್ಯಗುರು ಸತೀಶ್ ಭಟ್, ಶಿಕ್ಷಕ ವೃಂದ ಹಾಗೂ ಆಡಳಿತ ಮಂಡಳಿಯವರು ಸಹಕರಿಸಿದ್ದರು.













