ವಿಟ್ಲ: ವಿಠ್ಠಲ್ ಜೇಸೀಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಸಂಸ್ಕೃತೋತ್ಸವ ಕಾರ್ಯಕ್ರಮ ಆಚರಿಸಲಾಯಿತು.
ಹಿರಿಯ ಸಂಸ್ಕೃತ ಅಧ್ಯಾಪಕ ಕೃಷ್ಣ ಭಟ್, ಸಂಸ್ಕೃತ ಭಾರತೀಯ ಕಾರ್ಯಕರ್ತೆ ಮಮತೆಶ್ವರೀ, ಶಾಲಾ ಪ್ರಾಂಶುಪಾಲ ಜಯರಾಮ ರೈ, ನಿರ್ದೇಶಕ ಹಸನ್ ವಿಟ್ಲ ಮೊದಲಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪ್ರಕಾಶ್ ಕುಕ್ಕಿಲ ರವರು ಕಾತ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಕಾರ್ಯಕ್ರಮದಲ್ಲಿ 2022-23 ನೇ ಸಾಲಿನ ಹತ್ತನೇ ತರಗತಿಯ ಸಂಸ್ಕೃತ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಾದ ಶ್ರೀವರ್ಣ, ಆದರ್ಶ್ ಮರಡಿತ್ತಾಯ. ತೇಜಸ್ವಿ ತೆಂಕಬೈಲು ಹಾಗೂ ಅಖಿಲೇಶ್ ಎಂ ರನ್ನು ಗೌರವಿಸಲಾಯಿತು. ಸಂಸ್ಕೃತೋತ್ಸವದ ಅಂಗವಾಗಿ ನಡೆಸಿದ ‘ಸ್ಮರಣ ಶಕ್ತಿ ಸ್ಪರ್ಧೆಯ’ ವಿಜೇತರಿಗೆ ಬಹುಮಾನವನ್ನು ವಿತರಿಸಲಾಯಿತು.
ಅಥಿತಿಗಳಾಗಿ ನಿರ್ದೇಶಕ ಮೋನಪ್ಪ ಶೆಟ್ಟಿ, ಆಡಳಿತ ಅಧಿಕಾರಿ ರಾಧಾಕೃಷ್ಣ ಎರುಂಬು, ಉಪ ಪ್ರಾಂಶುಪಾಲೆ ಜ್ಯೋತಿ ಶೆಣೈ ಉಪಸ್ಥಿತರಿದ್ದರು. ಬಳಿಕ ವಿದ್ಯಾರ್ಥಿಗಳಿಂದ ಸಂಸ್ಕೃತ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ವಿದ್ಯಾರ್ಥಿನಿಯರು ಪ್ರಾರ್ಥಿಸಿ, ಶ್ರೀವಿದ್ಯಾ ಸ್ವಾಗತಿಸಿ, ಕೇಶವ ಶ್ರವಣ ರವರು ವಂದಿಸಿದರು. ವಿದ್ಯಾರ್ಥಿಗಳಾದ ಮೊಹಮ್ಮದ್ ರಾಝೀ ಹಾಗೂ ನರೇಶ ಕಾರ್ಯಕ್ರಮ ನಿರೂಪಿಸಿದರು. ಸಂಸ್ಕೃತ ಶಿಕ್ಷಕಿ ಸಂಧ್ಯಾ ರವರು ಕಾರ್ಯಕ್ರಮ ಸಂಯೋಜಿಸಿದ್ದರು.