ಸವಣೂರು: ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ವತಿಯಿಂದ ಕೆಸರುಗದ್ದೆ ಪಂದ್ಯಾಟ

0

ಸವಣೂರು: ಸವಣೂರು ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ದೈಹಿಕ ಶಿಕ್ಷಣ ವಿಭಾಗದ ವತಿಯಿಂದ ಕೆಸರುಗದ್ದೆ ಪಂದ್ಯಾಟ ಸೆ.5ರಂದು ಸವಣೂರಿನ ಕನ್ನಡಕುಮೇರು ಎಂಬಲ್ಲಿ ನಡೆಯಿತು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಕೆ ಸೀತಾರಾಮ ರೈ ಸವಣೂರು ಅವರು, ನಮ್ಮ ಪೂರ್ವಜರ ಜೀವನಶೈಲಿಯನ್ನು ನೆನಪಿಸಿಕೊಂಡು ಮಣ್ಣಿನಲ್ಲಿರುವ ಉತ್ತಮ ಗುಣಗಳು ಹೇಗೆ ನಮ್ಮ ಆರೋಗ್ಯವನ್ನು ವೃದ್ಧಿಸುವಲ್ಲಿ ಸಹಾಯಕವಾಗುತ್ತದೆ ಎಂಬುದನ್ನು ವಿವರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಅಶ್ವಿನ್ ಎಲ್ ಶೆಟ್ಟಿ ಮಾತನಾಡಿ, ಕೆಸರು ಗದ್ದೆ ಆಟಗಳು ತಮ್ಮ ಬಾಲ್ಯವನ್ನು ನೆನಪಿಸಿಕೊಂಡಂತಹ ಆಟಗಳು. ವಿದ್ಯಾರ್ಥಿಗಳು ಈ ಆಟದಲ್ಲಿ ಭಾಗವಹಿಸುವ ಮೂಲಕ ನಮ್ಮ ಮಣ್ಣಿನ ಸಂಸ್ಕೃತಿಯನ್ನು ಅರಿಯಲು ಸಾಧ್ಯ ಎಂದರು.

ಅತಿಥಿಯಾಗಿದ್ದ ಸವಣೂರು ಯುವಕಮಂಡಲದ ಅಧ್ಯಕ್ಷ ಜೀತಾಕ್ಷ ಜಿ ಕ್ರೀಡಾಪಟುಗಳಿಗೆ ಶುಭಹಾರೈಸಿದರು. ವೇದಿಕೆಯಲ್ಲಿ ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ನಾರಾಯಣ ಮೂರ್ತಿ ಕೆ ಉಪಪ್ರಾಂಶುಪಾಲ ಶೇಷಗಿರಿ ಎಂ ಹಾಗೂ ಪದ್ಮಾವತಿ ಮಜಲು ಉಪಸ್ಥಿತರಿದ್ದರು. ವಿದ್ಯಾರ್ಥಿ ಶಮೀರ್ ಸ್ವಾಗತಿಸಿ, ವಂದಿಸಿದರು. ವಿದ್ಯಾರ್ಥಿನಿ ಸ್ವಸ್ಥಿ ರೈ ಜಿ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here