ಈಶ್ವರಮಂಗಲ: ಶ್ರೀ ಗಜಾನನ ಆಂಗ್ಲಮಾಧ್ಯಮ ಶಾಲೆ ಹನುಮಗಿರಿಯಲ್ಲಿ ಸೆ.5ರಂದು ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು. ಪ್ರಾಂಶುಪಾಲ ಶಾಮಣ್ಣ ಕೆ ಇವರು ದೀಪ ಪ್ರಜ್ವಲನೆಯ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ, ವಿದ್ಯಾರ್ಥಿಗಳ ಜೀವನದಲ್ಲಿ ಶಿಕ್ಷಕರ ಮಹತ್ವದ ಬಗ್ಗೆ ತಿಳಿಸಿದರು.
ಶಿಕ್ಷಕಿ ಜ್ಯೋತ್ಸ್ನ ಮಾತನಾಡಿ, ಹೆತ್ತವರು ಮಕ್ಕಳ ಮೊದಲ ಗುರುಗಳು ಎಂದು ಹೇಳಿದರು. ವೇದಿಕೆಯಲ್ಲಿ ಮುಖ್ಯಗುರುಗಳಾದ ಅಮರನಾಥ ಬಿ ಪಿ ಹಾಗೂ ಎಲ್ಲಾ ಶಿಕ್ಷಕರು ಉಪಸ್ಥಿತರಿದ್ದರು. ಶಾಲಾ ಆಡಳಿತ ಮಂಡಳಿಯಿಂದ ಶಿಕ್ಷಕರಿಗೆ ಕಿರುಕಾಣಿಕೆಯನ್ನು ನೀಡಿ ಗೌರವಿಸಲಾಯಿತು. ವಿದ್ಯಾರ್ಥಿಗಳು ಶಿಕ್ಷಕರಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಿ ಬಹುಮಾನವನ್ನು ವಿತರಿಸಿದರು. ಓಣಂ ಹಬ್ಬದ ಪ್ರಯುಕ್ತ ಪೂಕಳಂ ಹಾಕಿದರು. ಪ್ರೀತಿಕಾ, ಬಿಂದ್ಯಾ, ರಿತ್ವಿಕ ಪ್ರಾರ್ಥಿಸಿ, ವೈಷ್ಣವ್ ಸ್ವಾಗತಿಸಿ ಚಿಂತನ ವಂದಿಸಿದರು. ತನಿಷಾ ಹೆಗ್ಡೆ, ಶ್ರೇಯ ಎಸ್ ರೈ ಕಾರ್ಯಕ್ರಮವನ್ನು ನಿರೂಪಿಸಿದರು. ಶಾಂತಿ ಮಂತ್ರದೊಂದಿಗೆ ಕಾರ್ಯಕ್ರಮವನ್ನು ಕೊನೆಗೊಳಿಸಲಾಯಿತು.