ಪುತ್ತೂರು: ಮಂಗಳೂರು ವಿಶ್ವವಿದ್ಯಾನಿಲಯ 2022-23 ನೇ ಸಾಲಿನ ಆರನೇ ಸೆಮಿಸ್ಟರ್ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದ್ದು, ಮರ್ಕಝುಲ್ ಹುದಾ ಪ್ರಥಮ ದರ್ಜೆ ಕಾಲೇಜು ಕುಂಬ್ರ 100% ಫಲಿತಾಂಶ ದಾಖಲಿಸಿದೆ.
ಬಿಕಾಂ ವಿಭಾಗದಲ್ಲಿ 8 ವಿದ್ಯಾರ್ಥಿನಿಯರು ಪರೀಕ್ಷೆಗೆ ಹಾಜರಾಗಿದ್ದು, ಎಲ್ಲಾ ವಿದ್ಯಾರ್ಥಿನಿಯರು ವಿಶಿಷ್ಟ ಶ್ರೇಣಿಯಲ್ಲಿ (ಡಿಸ್ಟಿಂಕ್ಷನ್) ತೇರ್ಗಡೆಯಾಗಿ ಉತ್ತಮ ಸಾಧನೆಯನ್ನು ಮಾಡಿದ್ದಾರೆ. ಬಿಕಾಂ ವಿಭಾಗದ ಹರ್ಷಾನ ಕೆ.ಎಚ್ ಅವರು ಶೇಕಡಾ 94% ಅಂಕಗಳೊಂದಿಗೆ ಮೊದಲ ಸ್ಥಾನ ಪಡೆದುಕೊಂಡಿದ್ದಾರೆ. ಫಾತಿಮಾತ್ ಝೋಹರ ಶೇಕಡಾ 92% ಅಂಕಗಳೊಂದಿಗೆ ದ್ವಿತೀಯ ಸ್ಥಾನ ಪಡೆದುಕೊಂಡರು.
2022-23ನೇ ಸಾಲಿನ ಬಿಕಾಂ ಪ್ರಥಮ ಸೆಮಿಸ್ಟರ್ ಫಲಿತಾಂಶವೂ ಪ್ರಕಟವಾಗಿದ್ದು, ಪರೀಕ್ಷೆಗೆ ಹಾಜರಾದ 48 ವಿದ್ಯಾರ್ಥಿನಿಯರಲ್ಲಿ ಎಲ್ಲಾ ವಿದ್ಯಾರ್ಥಿನಿಯರು ವಿಶಿಷ್ಟ ಶ್ರೇಣಿಯಲ್ಲಿ (ಡಿಸ್ಟಿಂಕ್ಷನ್) ತೇರ್ಗಡೆ ಹೊಂದಿರುತ್ತಾರೆ. ಉತ್ತಮ ಅಂಕಗಳೊಂದಿಗೆ ತೇರ್ಗಡೆ ಹೊಂದಿದ ವಿದ್ಯಾರ್ಥಿನಿಯರನ್ನು ಹಾಗೂ ಉತ್ತಮ ಫಲಿತಾಂಶ ತಂದುಕೊಡುವಲ್ಲಿ ಸಹಕರಿಸಿದ ಮರ್ಕಝುಲ್ ಹುದಾ ಪದವಿ ಕಾಲೇಜಿನ ಪ್ರಾಂಶುಪಾಲರು ಹಾಗೂ ಶಿಕ್ಷಕರನ್ನು ಆಡಳಿತ ಸಮಿತಿಯವರು ಅಭಿನಂದಿಸಿದ್ದಾರೆ.