ಸೆ.9: ರೋಟರಿ ಸಿಟಿ, ರೋಟರಿ ಸಿಟಿ ಚಾರಿಟೇಬಲ್ ಟ್ರಸ್ಟ್ ನಿಂದ ನೆಲ್ಲಿಕಟ್ಟೆ ಸರಕಾರಿ ಶಾಲೆಯಲ್ಲಿ ವಿದ್ಯಾಜ್ಯೋತಿ ಎಲ್.ಕೆ.ಜಿ, ಯುಕೆಜಿ ತರಗತಿಯ ಉದ್ಘಾಟನೆ

0

ಪುತ್ತೂರು: ರೋಟರಿ ಕ್ಲಬ್ ಪುತ್ತೂರು ಸಿಟಿ, ರೋಟರಿ ಕ್ಲಬ್ ಪುತ್ತೂರು ಸಿಟಿ ಚಾರಿಟೇಬಲ್ ಟ್ರಸ್ಟ್ ಮತ್ತು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪುತ್ತೂರು ಇದರ ಆಶ್ರಯದಲ್ಲಿ ನಡೆಯುವ ‘ವಿದ್ಯಾಜ್ಯೋತಿ’ ಎಲ್.ಕೆ.ಜಿ ಮತ್ತು ಯುಕೆಜಿ ತರಗತಿಯ ಉದ್ಘಾಟನಾ ಸಮಾರಂಭವು ಸೆ.9 ರಂದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನೆಲ್ಲಿಕಟ್ಟೆ ಇಲ್ಲಿ ಪೂರ್ವಾಹ್ನ ಜರುಗಲಿದೆ.


ಶಾಸಕ ಅಶೋಕ್ ಕುಮಾರ್ ರೈಯವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ರೋಟರಿ ಜಿಲ್ಲಾ ಯೋಜನೆಯಾದ ಅಂಗನವಾಡಿ ಪುನಶ್ಚೇತನ ಇದರ ಉದ್ಘಾಟನೆಯನ್ನು 2024-25ರ ರೋಟರಿ ನಿಯೋಜಿತ ಜಿಲ್ಲಾ ಗವರ್ನರ್ ವಿಕ್ರಂ ದತ್ತರವರು ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೋಟರಿ ಕ್ಲಬ್ ಪುತ್ತೂರು ಸಿಟಿ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಜಿ.ಸುರೇಂದ್ರ ಕಿಣಿರವರು ವಹಿಸಿಕೊಳ್ಳಲಿದ್ದಾರೆ. ಅತಿಥಿಗಳಾಗಿ ರೋಟರಿ ವಲಯ ನಾಲ್ಕರ ಅಸಿಸ್ಟೆಂಟ್ ಗವರ್ನರ್ ಲಾರೆನ್ಸ್ ಗೊನ್ಸಾಲ್ವಿಸ್, ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್.ಆರ್, ನಗರಸಭಾ ಸದಸ್ಯ ಶಕ್ತಿ‌ ಸಿನ್ಹಾ, ನೆಲ್ಲಿಕಟ್ಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಯಶೋಧ, ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷೆ ವಸುಧಾರವರು ಭಾಗವಹಿಸಲಿದ್ದಾರೆ ಎಂದು ರೋಟರಿ ಕ್ಲಬ್ ಪುತ್ತೂರು ಸಿಟಿ ಅಧ್ಯಕ್ಷೆ ಗ್ರೇಸಿ ಗೊನ್ಸಾಲ್ವಿಸ್, ಕಾರ್ಯದರ್ಶಿ ಶ್ಯಾಮಲ ಎಂ ಶೆಟ್ಟಿ, ರೋಟರಿ ಕ್ಲಬ್ ಪುತ್ತೂರು ಸಿಟಿ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಜಿ.ಸುರೇಂದ್ರ ಕಿಣಿ, ಕಾರ್ಯದರ್ಶಿ ಸುಧಾಕರ್ ಶೆಟ್ಟಿ ಬಿ.ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರೋಟರಿ ಜಿಲ್ಲಾ ಯೋಜನೆಯನ್ವಯ ತಾಲೂಕಿನಲ್ಲಿನ ಆಯ್ದ 40 ಅಂಗನವಾಡಿಗಳಿಗೆ ಅಡುಗೆಗೆ ಕುಕ್ಕರ್, ಮಿಕ್ಷರ್ ಗ್ರೈಂಡರ್, ಸ್ಟೀಲ್ ಕಪಾಟು, ಯೂನಿಫಾರಂ, ಇನ್ವರ್ಟರ್ ಗಳನ್ನು ನೀಡುವ ಮೂಲಕ ಅಭಿವೃದ್ಧಿಗೆ ಚಾಲನೆ ನೀಡಲಾಗುವುದು. ಅಲ್ಲದೆ ರೋಟರಿ ಸಿಟಿ ವತಿಯಿಂದ ನೆಲ್ಲಿಕಟ್ಟೆ ಶಾಲೆಯಲ್ಲಿ ನಿರ್ಮಿಸಲ್ಪಟ್ಟ ಜಾರುಬಂಡಿಯನ್ನು ಈ ಸಂದರ್ಭದಲ್ಲಿ ಹಸ್ತಾಂತರ ಮಾಡಲಾಗುತ್ತದೆ.

LEAVE A REPLY

Please enter your comment!
Please enter your name here