ನಾಳೆ(ಸೆ.9): ರಸ್ತೆ ಸುರಕ್ಷತೆ, ಜಾಗೃತಿ ಕಾರ್ಯಕ್ರಮ

0

ಪುತ್ತೂರು: ರೋಟರಿ ಕ್ಲಬ್ ಪುತ್ತೂರು ಯುವ ಮತ್ತು ಇನ್ನರ್ ವೀಲ್ ಕ್ಲಬ್ ವತಿಯಿಂದ ಪುತ್ತೂರು ಸಂಚಾರ ಪೊಲೀಸ್ ಠಾಣೆ, ರೋಟರಿ ಪಬ್ಲಿಕ್ ಇಮೇಜ್ ಮತ್ತು ರಸ್ತೆ ಸುರಕ್ಷತಾ ಜಾಗೃತಿ, ಶ್ರೀ ರಾಮಕೃಷ್ಣ ಪ್ರೌಢಶಾಲೆಯ ಇಂಟರೆಕ್ಟ್ ಕ್ಲಬ್‌ಗಳ ಸಹಯೊಗದೊಂದಿಗೆ ರಸ್ತೆ ಸುರಕ್ಷತೆ ಮತ್ತು ಜಾಗೃತಿ ಕಾರ್ಯಕ್ರಮ ಸೆ.9ರಂದು ಬೆಳಿಗ್ಗೆ ಗಂಟೆ 10ಕ್ಕೆ ಪುತ್ತೂರು ಬಂಟರ ಭವನದಲ್ಲಿ ನಡೆಯಲಿದೆ.


ಡಿವೈಸ್ಪಿ ಡಾ | ಗಾನ ಪಿ ಕುಮಾರ್, ರೋಟರಿ ಜಿಲ್ಲಾ ತರಬೇತುದಾರ ಶೇಖರ್ ಶೆಟ್ಟಿ, ಪುತ್ತೂರು ಸಂಚಾರ ಪೊಲೀಸ್ ಠಾಣೆಯ ಎಸ್.ಐ ಉದಯ ರವಿ ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಲಿದ್ದಾರೆ. ಜಿಲ್ಲಾ ಗವರ್ನರ್ ಮೇಜರ್‌ಡೋನರ್ ಪ್ರಕಾಶ್ ಕಾರಂತ್ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.

ಶ್ರೀ ರಾಮಕೃಷ್ಣ ಪ್ರೌಢಶಾಲೆಯ ಸಂಚಾಲಕ ಹೇಮನಾಥ ಶೆಟ್ಟಿ ಕಾವು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಅಸಿಸ್ಟೆಂಟ್ ಗವರ್ನರ್ ನರಸಿಂಹ ಪೈ, ಪಬ್ಲಿಕ್ ಇಮೇಜ್‌ನ ಜಿಲ್ಲಾಧ್ಯಕ್ಷ ವಿಶ್ವಾಸ್ ಶೆಣೈ, ಶ್ರೀ ರಾಮಕೃಷ್ಣ ಪ್ರೌಢಶಾಲೆಯ ಮುಖ್ಯಗುರು ಜಯಲಕ್ಷ್ಮೀ ಆರ್ ಅವರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಸಂಸ್ಥೆಯ ಪ್ರಕಟನೆ ತಿಳಿಸಿದೆ.

LEAVE A REPLY

Please enter your comment!
Please enter your name here