ಉಪ್ಪಿನಂಗಡಿ: ಸ್ವಚ್ಛ ಸರ್ವೇಕ್ಷಣಾ ಗ್ರಾಮೀಣ- 2023 ಸಮೀಕ್ಷೆಯಲ್ಲಿ 34 ನೆಕ್ಕಿಲಾಡಿ ಗ್ರಾ.ಪಂ. ದ.ಕ. ಜಿಲ್ಲಾ ಮಟ್ಟದಲ್ಲಿ ಪ್ರಶಸ್ತಿಗೆ ಆಯ್ಕೆಯಾಗಿದ್ದು, ಸೆ.11ರಂದು ದ.ಕ. ಜಿಲ್ಲಾ ಪಂಚಾಯತ್ನ ನೇತ್ರಾವತಿ ಸಭಾಂಗಣದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.
ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಜಲಶಕ್ತಿ ಮಂತ್ರಾಲಯ ಇವರು ಸ್ವಚ್ಛ ಭಾರತ್ ಮಿಷನ್ (ಗ್ರಾ) ಯೋಜನೆಯಡಿ ಸ್ವಚ್ಛ ನೈರ್ಮಲ್ಯ ಘಟಕಾಂಶಗಳು, ಓಡಿಎಫ್ ಫ್ಲಸ್ ಸುಸ್ಥಿರತೆಗೊಳಿಸಲು ಹಮ್ಮಿಕೊಂಡಿರುವ ಚಟುವಟಿಕೆಗಳ ಕುರಿತು ಸಮೀಕ್ಷೆ ನಡೆಸಿ, ಉತ್ತಮವಾಗಿ ಕಾರ್ಯನಿರ್ವಹಿಸಿದ ಗ್ರಾಮ ಪಂಚಾಯತ್ಗಳಿಗೆ ಜಿಲ್ಲಾ ಮಟ್ಟದಲ್ಲಿ ಈ ಪ್ರಶಸ್ತಿ ನೀಡಲಾಗುತ್ತದೆ. ದಕ್ಷಿಣ ಕನ್ನಡ ಜಿಲ್ಲೆಯ 8 ತಾಲೂಕಿನ 15 ಗ್ರಾ.ಪಂ.ಗಳು ಈ ಪ್ರಶಸ್ತಿಗೆ ಆಯ್ಕೆಯಾಗಿವೆ.