ಎಸ್‌ಡಿಪಿಐ ಪುತ್ತೂರು ಕ್ಷೇತ್ರ ಸಮಿತಿಯ ಮಾಸಿಕ ಸಭೆ

0

ಪುತ್ತೂರು: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪುತ್ತೂರು ವಿಧಾನ ಸಭಾ ಕ್ಷೇತ್ರ ಸಮಿತಿಯ ಮಾಸಿಕ ಸಭೆ ಸೆ.9ರಂದು ಪಕ್ಷದ ಕಚೇರಿಯಲ್ಲಿ ನಡೆಯಿತು. ಎಸ್‌ಡಿಪಿಐ ಪುತ್ತೂರು ಕ್ಷೇತ್ರ ಸಮಿತಿ ಅಧ್ಯಕ್ಷ ಇಬ್ರಾಹಿಂ ಸಾಗರ್ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಸಮಿತಿ ಸದಸ್ಯರಾದ ಅಬೂಬಕ್ಕರ್ ಸಿದ್ದಿಕ್‌ರವರು ಕಾರ್ಯಕರ್ತರಿಗೆ ಮಾರ್ಗದರ್ಶನ ನೀಡಿ ಮಾತನಾಡಿದರು. ಸಭೆಯಲ್ಲಿ 5 ಬ್ಲಾಕ್‌ಗಳ ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳು ಭಾಗವಹಿಸಿದ್ದರು. ಎಸ್‌ಡಿಪಿಐ ಪುತ್ತೂರು ಕ್ಷೇತ್ರ ಸಮಿತಿ ಕಾರ್ಯದರ್ಶಿ ಅಬ್ದುಲ್ ರಹಿಮಾನ್ ಸ್ವಾಗತಿಸಿದರು. ಜೊತೆ ಕಾರ್ಯದರ್ಶಿ ಅಬ್ದುಲ್ ರಹಿಮಾನ್ ಕೊಡಿಪ್ಪಾಡಿ ವಂದಿಸಿದರು.

LEAVE A REPLY

Please enter your comment!
Please enter your name here