ಪುತ್ತೂರು: ವಿದ್ಯಾಭಾರತಿ ಕರ್ನಾಟಕ ಮತ್ತು ಎಲಿಮಲೆ ಜ್ಞಾನದೀಪ ಆಂಗ್ಲ ಮಾಧ್ಯಮ ಶಿಕ್ಷಣ ಸಂಸ್ಥೆಯ ಜಂಟಿ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಥ್ರೋಬಾಲ್ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ಮತ್ತು ಬಾಲಕಿಯರ ತಂಡ ಪ್ರಥಮ ಸ್ಥಾನವನ್ನು ಪಡೆದು ಬೆಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಥ್ರೋಬಾಲ್ ಪಂದ್ಯಾಟಕ್ಕೆ ಆಯ್ಕೆಯಾಗಿದೆ.
ಬಾಲಕರ ವಿಭಾಗದಲ್ಲಿ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ಶರತ್ ಶೆಟ್ಟಿ, ಮೋಕ್ಷಿತ್ ಪಿ ಶೆಟ್ಟಿ, ಕೌಶಿಕ್, ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ಪ್ರಜ್ವಲ್, ಗಗನ್, ಪ್ರಜ್ವಲ್, ಕಲಾ ವಿಭಾಗದ ಶಮಿತ್ ಪ್ರಸಾದ್ ಪಿ, ವಿಜ್ಞಾನ ವಿಭಾಗದ ಸುಜಿತ್, ರೋಶಿತ್ ಆರ್, ಲಕ್ಷ್ಮೀದಾಸ್ ಎನ್, ಸುಚಿತ್, ಜೀವನ್ ಕುಮಾರ್, ಭಾರ್ಗವ್ ಎಸ್ ಭಾಗವಹಿಸಿದ್ದರು. ಈ ಪಂದ್ಯಾಟದಲ್ಲಿ ವಿದ್ಯಾರ್ಥಿ ಪ್ರಜ್ವಲ್ ಉತ್ತಮ ಎಸೆತಗಾರ ಹಾಗೂ ಸರ್ವಾಂಗೀಣ ಆಟಗಾರ ಪ್ರಶಸ್ತಿಯನ್ನು ಗಳಿಸಿದ್ದಾನೆ.
ಬಾಲಕಿಯರ ವಿಭಾಗದಲ್ಲಿ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ಶ್ರೇಯಾ, ಮಾನ್ಯ ಶೆಟ್ಟಿ, ವರ್ಷಿಣಿ, ತೃಪ್ತಿ ಕೆ, ಕಲಾ ವಿಭಾಗದ ಕೀರ್ತಿಲತಾ ಬಿ ಎಲ್, ವಿಜ್ಞಾನ ವಿಭಾಗದ ಪುಣ್ಯಶ್ರೀ ವಿ ಕೆ, ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ಮಿಥಾಲಿ, ಹಿತೈಷಿ ಬಿ ಕೆ, ಜಸ್ಮಿತಾ, ವಿಜ್ಞಾನ ವಿಭಾಗದ ಪ್ರತೀಕ್ಷಾ ಎಂ, ಸಾತ್ವಿ ಬಿ ಕೆ ಭಾಗವಹಿಸಿದ್ದರು. ಈ ಪಂದ್ಯಾಟದಲ್ಲಿ ವಿದ್ಯಾರ್ಥಿನಿ ಕೀರ್ತಿಲತಾ ಉತ್ತಮ ಹಿಡಿತಗಾರ ಹಾಗೂ ವರ್ಷಿಣಿ ಸರ್ವಾಂಗೀಣ ಆಟಗಾರ ಪ್ರಶಸ್ತಿಯನ್ನು ಗಳಿಸಿದ್ದಾರೆ. ಈ ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್, ಡಾ. ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ. ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದ ಅಭಿನಂದಿಸಿದ್ದಾರೆ.